ಬೆಂಗಳೂರು:ಮಾಸಿಕ ಗೌರವ ಧನ ₹12,000 ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದೆ.
ಗ್ರಾಮದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಿದ ಆಶಾ ಕಾರ್ಯಕರ್ತೆ ಇಂದು ರಾಜ್ಯಾದ್ಯಂತ 42,000 ಆಶಾ ಕಾರ್ಯಕರ್ತೆಯರು ತಮ್ಮ ಕುಟುಂಬ ಸದಸ್ಯರ ಜೊತೆ ಬೇಡಿಕೆಗಳಿರುವ ನಾಮಫಲಕಗಳನ್ನು ಪ್ರದರ್ಶಿಸಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿ ಮುಖ್ಯಮಂತ್ರಿಗಳಿಗೆ ಪತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ರಸ್ತೆಯಲ್ಲಿ ಪತಿ ಮತ್ತು ಮಕ್ಕಳೊಂದಿಗೆ ಆಶಾ ಕಾರ್ಯಕರ್ತೆ ಪ್ರತಿಭಟನೆ ಇಷ್ಟಾದರೂ ಸರ್ಕಾರ ಇನ್ನೂ ಬೇಡಿಕೆ ಈಡೇರಿಕೆ ಕುರಿತು ಮಾತುಕತೆ ನಡೆಸಿಲ್ಲ ಎಂದು ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ.
ಕುಟುಂಬ ಸದಸ್ಯರೊಂದಿಗೆ ಆಶಾ ಕಾರ್ಯಕರ್ತೆ ಪ್ರತಿಭಟನೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಗಣನೀಯವಾಗಿ ಹೆಚ್ಚುತ್ತಿದ್ದು, ಆಶಾ ಕಾರ್ಯಕರ್ತೆಯರ ಗೈರಿನಿಂದಾಗಿ ಸಾಕಷ್ಟು ರೋಗಿಗಳಿಗೆ ಅಗತ್ಯ ಮಾತ್ರೆಗಳು ತಲುಪುತ್ತಿಲ್ಲ. ಕೋವಿಡ್ ಸಂಬಂಧಿತ ಸರ್ವೇಗಳೂ ನಡೆಯುತ್ತಿಲ್ಲ. ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕು. ನಂತರ ಆಶಾ ಕಾರ್ಯಕರ್ತೆಯರು ಎಂದಿನಂತೆ ಕೆಲಸದಲ್ಲಿ ತೊಡಗುತ್ತಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ ತಿಳಿಸಿದ್ದಾರೆ.
ಮನೆಯಿಂದಲೇ ಬೇಡಿಕೆಗಳ ನಾಮಫಲಕ ಪ್ರದರ್ಶನ