ಬೆಂಗಳೂರು:ಉತ್ತರ ಪ್ರದೇಶ ಮೂಲದ ಕಾರ್ಮಿಕರುತಮ್ಮ ರಾಜ್ಯಕ್ಕೆ ತೆರಳಲು ವೈಟ್ಫೀಲ್ಡ್ ವಿಭಾಗದ ಕಾಡುಗೊಂಡನಹಳ್ಳಿ ಠಾಣೆಗೆ ನೋಂದಣಿಗೆ ತೆರಳಿದ್ದಾಗ ಅಲ್ಲಿನ ಎಎಸ್ಐ ದರ್ಪ ತೋರಿದ ಆರೋಪ ಕೇಳಿ ಬಂದಿದೆ.
ವಲಸೆ ಕಾರ್ಮಿಕರ ಮೇಲೆ ASI ದರ್ಪ ಆರೋಪ: ಯುಪಿ ಸಿಎಂಗೆ ನೆಟ್ಟಿಗರಿಂದ ಟ್ವೀಟ್
ಉತ್ತರ ಪ್ರದೇಶ ಮೂಲದ ವಲಸೆ ಕಾರ್ಮಿಕರ ಮೇಲೆ ಬೆಂಗಳೂರಿನ ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಒಬ್ಬರು ದರ್ಪ ತೋರಿರುವ ಆರೋಪ ಕೇಳಿಬಂದಿದೆ.
ಉತ್ತರ ಪ್ರದೇಶ ಮೂಲದ ಕಾರ್ಮಿಕರು ಅವರನ್ನು ತಮ್ಮ ರಾಜ್ಯಗಳಿಗೆ ಕಳುಹಿಸಬೇಕೆಂದು ನೋಂದಣಿ ಮಾಡಿಸಿಕೊಳ್ಳಲು ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ, ಉತ್ತರ ಪ್ರದೇಶ ಮೂಲದ ಕಾರ್ಮಿಕರ ಮೇಲೆ ಅಲ್ಲಿನ ಎಎಸ್ಐ ಬೂಟುಕಾಲಿನಿಂದ ಒದ್ದು ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ.
ಎಎಸ್ಐ ದರ್ಪ ತೋರಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕಾರ್ಮಿಕರ ನೆರವಿಗೆ ಧಾವಿಸುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಹಾಗೂ ವೈಟ್ ಫೀಲ್ಡ್ ಡಿಸಿಪಿ ಅನುಚೇತ್ಗೆ ಟ್ಯಾಗ್ ಮಾಡಿ ನೆಟ್ಟಿಗರು ಟ್ವೀಟ್ ಮಾಡಿದ್ದಾರೆ. ಸದ್ಯ ವೈಟ್ಫೀಲ್ಡ್ ವಿಭಾಗ ಡಿಸಿಪಿ ಅನುಚೇತ್ ತನಿಖೆಗೆ ಆದೇಶಿಸಿದ್ದು ಎಸಿಪಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.