ಕರ್ನಾಟಕ

karnataka

ETV Bharat / city

ಗಾರೆ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನ ಬರ್ಬರ ಹತ್ಯೆ - ಗಾರೆ ಕೆಲಸ ಮಾಡುತ್ತಿದ್ದವನ ಬರ್ಬರ ಹತ್ಯೆ

ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದು ಜೀವನಕ್ಕಾಗಿ ಗಾರೆ ಕೆಲಸ ಮಾಡಿಕೊಂಡು ತಿಂಡ್ಲು ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ‌. ಎಂದಿನಂತೆ ನಿನ್ನೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ. ಆದರೆ, ಇಂದು ಬೆಳಗ್ಗೆ ಆಗುವಷ್ಟರಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾನೆ.

ಬರ್ಬರ ಹತ್ಯೆ
ಬರ್ಬರ ಹತ್ಯೆ

By

Published : Apr 21, 2021, 3:20 PM IST

ಬೆಂಗಳೂರು:ನಗರದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಬರ್ಬರವಾಗಿ ಹತ್ಯೆಯಾಗಿರುವ ಘಟನೆ, ವಿದ್ಯಾರಣಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಿಂಡ್ಲು ಬಳಿ ನಡೆದಿದೆ.

ಹುಬ್ಬಳ್ಳಿ ಮೂಲದ 25 ವರ್ಷದ ಪ್ರಕಾಶ್ ಹತ್ಯೆಯಾದವನು. ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದು ಜೀವನಕ್ಕಾಗಿ ಗಾರೆ ಕೆಲಸ ಮಾಡಿಕೊಂಡು ತಿಂಡ್ಲು ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ‌. ಎಂದಿನಂತೆ ನಿನ್ನೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ. ಆದರೆ, ಇಂದು ಬೆಳಗ್ಗೆ ಆಗುವಷ್ಟರಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾನೆ.

ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಒಬ್ಬಂಟಿಯಾಗಿ ವಾಸವಾಗಿದ್ದ ಪ್ರಕಾಶ್​ನನ್ನು ಯಾವ ಕಾರಣಕ್ಕಾಗಿ ಹಂತಕರು ಕೊಲೆ ಮಾಡಿದ್ದಾರೆ ಎಂಬುದರ ಬಗ್ಗೆ ಪ್ರಾಥಮಿಕ ಮಾಹಿತಿ ಕಲೆ ಹಾಕಿರುವ‌ ಪೊಲೀಸರು, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details