ಬೆಂಗಳೂರು:ಬಂಧಿಸಲು ಹೋದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಶುಕ್ರವಾರ ತಡರಾತ್ರಿ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಸಂಬಂಧ ಪ್ರಮುಖ ಆರೋಪಿ ರಫೀಕ್ (30) ಬಂಧಿಸಲ್ಪಟ್ಟಿದ್ದಾನೆ. ರೌಡಿಶೀಟರ್ ಶಿವರಾಜ್ ಅಲಿಯಾಸ್ ಕುಳ್ಳ ಶಿವರಾಜ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಬೆಂಗಳೂರು ಪೊಲೀಸರ ಮೇಲೆ ರೌಡಿಶೀಟರ್ ಹಲ್ಲೆ: ಪ್ರಮುಖ ಆರೋಪಿ ಅರೆಸ್ಟ್ - ಬೆಂಗಳೂರು ಅಪರಾಧ ಸುದ್ದಿ
ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಫೀಕ್ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ. ಶುಕ್ರವಾರ ರಾತ್ರಿ ಈತ ತನ್ನ ಸ್ನೇಹಿತನೊಬ್ಬನ ಮೇಲೆ ಹಲ್ಲೆ ನಡೆಸಿ, ಸರ ಕಸಿದು ಗಲಾಟೆ ಮಾಡಿದ್ದ. ಗಸ್ತಿನಲ್ಲಿದ್ದ ಪೊಲೀಸರಿಗೆ ಈ ಗಲಾಟೆ ಬಗ್ಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ಪೊಲೀಸರು ಬ್ಯಾಡರಹಳ್ಳಿಯ ಕಾವೇರಿ ಬಾರ್ ಬಳಿ ಹೋಗಿದ್ದರು.
ಆ ವೇಳೆ ರೌಡಿಶೀಟರ್ ಶಿವರಾಜ್ ಬ್ಯಾಡರಹಳ್ಳಿಯ ಸಬ್‌ಇನ್‌ಸ್ಪೆಕ್ಟರ್ ಹರೀಶ್ ಹಾಗೂ ಇತರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಯತ್ನಿಸಿ, ಸ್ಥಳದಿಂದ ಪರಾರಿಯಾಗಿದ್ದ. ಈಗ ಶಿವರಾಜ್ ಸಹಚರ ರಫೀಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ. ಆರೋಪಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.