ಬೆಂಗಳೂರು: ಬೆಂಗಳೂರಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಇದೇ 2021-22ನೇ ಶೈಕ್ಷಣಿಕ ಸಾಲಿನಿಂದ ಕಾರ್ಯಾರಂಭ ಮಾಡಲಿದೆ ಅಂತಾ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ. ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಹಾಗೂ ಸಂಖ್ಯಾತ್ಮಕ ಬದಲಾವಣೆ ತರುವ ಹಾದಿಯಲ್ಲಿ ಇದು ಮತ್ತೊಂದು ಹೆಜ್ಜೆಯಾಗಲಿದೆ ಅಂತಾ ತಿಳಿಸಿದ್ದಾರೆ.
ಈ ಕಾಲೇಜಿನಲ್ಲಿ 2021-22ನೇ ಸಾಲಿನಿಂದ 100 ಸೀಟುಗಳ ಪ್ರವೇಶ ಮಿತಿಯುಳ್ಳ ಬಿಎಸ್ಸಿ ನರ್ಸಿಂಗ್ ಕೋರ್ಸ್ ಅನ್ನು ಹೊಸದಾಗಿ ಪ್ರಾರಂಭಿಸಲಾಗುತ್ತಿದೆ. ಕೋರ್ಸುಗಳ ಸಂಯೋಜನೆಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಂಜೂರಾತಿ ಪಡೆಯಬೇಕಿದೆ.
ವಿಶ್ವವಿದ್ಯಾಲಯವು ನಿಗದಿಪಡಿಸಿರುವ ಪರಿನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಅಂತಾ ಆದೇಶಿಸಲಾಗಿದೆ. ಜೊತೆಗೆ ವಿವಿ ನಿಗದಿಪಡಿಸಿರುವ ಮೂಲಸೌಲಭ್ಯಗಳನ್ನು ಕಡ್ಡಾಯವಾಗಿ ಹೊಂದಿರಬೇಕು.