ಕರ್ನಾಟಕ

karnataka

ETV Bharat / city

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ.. ಐವರು ಆರೋಪಿಗಳು ಪೊಲೀಸರ ವಶಕ್ಕೆ.. - ಮಾರಕಾಸ್ತ್ರಗಳಿಂದ ಹಲ್ಲೆ

ಹಳೆ ದ್ವೇಷದ ಹಿನ್ನೆಲೆ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯ್ಯಪ್ಪನಹಳ್ಳಿ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

By

Published : Oct 7, 2019, 7:02 PM IST

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯ್ಯಪ್ಪನಹಳ್ಳಿ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಬ್ಲಿ ಹಾಗೂ ಕಾರ್ತಿಕ್ ಸೇರಿ ಐವರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌. ಸಿವಿರಾಮನ್‌ನಗರದ ಬಿಜೆಪಿ ಮುಖಂಡ ಲೋಕೇಶ್ ಹಾಗೂ ಆತನ ಸಹೋದರ ಹರೀಶ್ ಇದೇ ಅಕ್ಟೋಬರ್ 3ರಂದು ಲಕ್ಷ್ಮೀಪುರ ಬಳಿ ಹೋಗುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಚಾಕು ಇರಿತಕ್ಕೆ ಒಳಗಾಗಿದ್ದ ಹರೀಶ್​ ಗಂಭೀರವಾಗಿ ಗಾಯಗೊಂಡಿದ್ದರು.

ಈ ಸಂಬಂಧ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಕುರಿತು ತನಿಖೆ ಪ್ರಾರಂಭಿಸಿದ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ABOUT THE AUTHOR

...view details