ಕರ್ನಾಟಕ

karnataka

ETV Bharat / city

ಇಂಜಿನಿಯರಿಂಗ್‌ ವಿದ್ಯಾರ್ಥಿ ನಿಗೂಢ ಸಾವಿನ ಪ್ರಕರಣ : ತನಿಖೆ ಚುರುಕುಗೊಳಿಸಿದ ಸಿಐಡಿ ತಂಡ - kannada news

ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಸ್ಥಳ ಪರಿಶೀಲನೆ ನಡೆಸಿದ ಸಿಐಡಿ ತಂಡ.

ರಾಜ್ಯದಲ್ಲಿ ನಡೆದ ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ ಸ್ಥಳ ಪರಿಶಿಲನೆ ನಡೆಸಿದ ಸಿಐಡಿ ತಂಡ

By

Published : Apr 21, 2019, 8:58 PM IST

ಬೆಂಗಳೂರು/ರಾಯಚೂರು:ನವೋದಯ ಕಾಲೇಜಿನ ವಿದ್ಯಾರ್ಥಿನಿಯ ಸಾವಿನ ಪ್ರಕರಣಕ್ಕೆ ಸಂಬಂಧ ಇಂದು ಸಿಐಡಿ ತಂಡದಿಂದ ಸಾವನ್ನಪ್ಪಿದ ಸ್ಥಳ ಪರಿಶೀಲನೆ ಮಾಡಲಾಯಿತು.

ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜುಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪಾದ ಸಾವಿನ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಿದ್ದರು. ಐಪಿಎಸ್ ಅಧಿಕಾರಿ ಶರಣಪ್ಪ ನೇತೃತ್ವದ ಸಿಐಡಿ ತಂಡದಲ್ಲಿ ಒಬ್ಬ ಡಿವೈಎಸ್ಪಿ, ಇಬ್ಬರು ಸಿಪಿಐ ಹಾಗೂ ಎಂಟು ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ತನಿಖೆ ಚುರುಕುಗೊಳಿಸಿದ್ದಾರೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಸ್ಥಳ ಪರಿಶೀಲನೆ

ಡಿವೈಎಸ್ಪಿ ರವಿಶಂಕರ್ ನೇತೃತ್ವದ ಸಿಐಡಿ ತಂಡವಿದ್ಯಾರ್ಥಿಯ ಶವಪತ್ತೆಯಾದ ಬೋಳಮಾನ್ ದೊಡ್ಡಿ ರಸ್ತೆಯ ಹನುಮಂತ ದೇವಸ್ಥಾನದ ಬಳಿ ತೆರಳಿ ಸ್ಥಳ ಪರಿಶೀಲನೆ ನಡೆಸಿತು. ಈ ಕುರಿತು ನಾಳೆ ಸುದ್ದಿಗೋಷ್ಠಿ ನಡೆಸಿ ಪೂರ್ಣ ಮಾಹಿತಿ ನೀಡುವುದಾಗಿ ಸಿಐಡಿ ತಂಡದ ಅಧಿಕಾರಿಗಳು ಹೇಳಿದ್ದಾರೆ.

ABOUT THE AUTHOR

...view details