ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹುದ್ದೆಗೆ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಲೌಕಿಕ ಜೀವನದಿಂದ ಆಧ್ಯಾತ್ಮಿಕ ಬದುಕಿನತ್ತ ಸಾಗುವುದಾಗಿ ತಿಳಿಸಿದ್ದಾರೆ. ಈ ಮೂಲಕ 50 ವರ್ಷಗಳ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದಾರೆ.
ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ
ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ ಸಲ್ಲಿಸಿದ್ದು, ಲೌಕಿಕ ಜೀವನದಿಂದ ಆಧ್ಯಾತ್ಮಿಕದತ್ತ ಸಾಗುವುದಾಗಿ ಪ್ರಕಟಿಸಿದ್ದಾರೆ.
ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆ ಪುಟ್ಟಸ್ವಾಮಿ ರಾಜೀನಾಮೆ..!
ಸನ್ಯಾಸತ್ವ ಸ್ವೀಕಾರ: ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿಯಾಗಲಿರುವ ಪುಟ್ಟಸ್ವಾಮಿ, ಮೇ 6ರಂದು ಸನ್ಯಾಸ ದೀಕ್ಷೆ ಪಡೆಯುವರು. ಮೇ 15 ರಂದು ಪಟ್ಟಾಭಿಷೇಕ ನಡೆಯಲಿದೆ. ನೆಲಮಂಗಲ ಸಮೀಪವಿರುವ ಈ ಮಠಕ್ಕೆ ಪೀಠಾಧಿಪತಿಯಾಗಲಿದ್ದು, ರಾಜರಾಜೇಶ್ವರಿ ಜಯೇಂದ್ರ ಸ್ವಾಮೀಜಿ ದೀಕ್ಷೆ ನೀಡಲಿದ್ದಾರೆ.
ಇದನ್ನೂ ಓದಿ : ಹಲಾಲ್ ಕಟ್ ವಿವಾದದ ಬೆನ್ನಲ್ಲೇ ಮುಸ್ಲಿಂ ಮಾಂಸ ವ್ಯಾಪಾರಿಗಳಿಗೆ ಶಾಕ್..