ಕರ್ನಾಟಕ

karnataka

ETV Bharat / city

ರಾಜ್ಯದಲ್ಲಿ ಇನ್ನು ಅಭಿವೃದ್ಧಿ ಪರ್ವ ಆರಂಭ: ವಿಶ್ವಾಸ ಗೆದ್ದ ಬಳಿಕ ಬಿಎಸ್​ವೈ ಇಂಗಿತ - undefined

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲು ಕ್ಷಣಗಣನೆ ಆರಂಭಗೊಂಡಿದೆ. ಗುರುವಾರ ಮುಖ್ಯಮಂತ್ರಿಯಾಗಿ ಬಿಎಸ್​ವೈ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಇನ್ನು ಆರಂಭ

By

Published : Jul 23, 2019, 8:41 PM IST

ಬೆಂಗಳೂರು:ವಿಶ್ವಾಸಮತ ಯಾಚನೆಯಲ್ಲಿ ಕುಮಾರಸ್ವಾಮಿ ವಿಫಲರಾದ ಹಿನ್ನೆಲೆಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಂಡಿದೆ. ಹೀಗಾಗಿ ಬಿಎಸ್​ವೈ ಸರ್ಕಾರದ ಆಡಳಿತ ಆರಂಭಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

ವಿಶ್ವಾಸಮತ ಯಾಚನೆಯಲ್ಲಿ ಸಿಎಂ ಕುಮಾರಸ್ವಾಮಿ ಪರವಾಗಿ ಕೇವಲ 99 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಬಿಜೆಪಿ ಪರವಾಗಿ 105 ಸದಸ್ಯರು ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ವಿಶ್ವಾಸಮತ ಯಾಚನೆಯ ಗೆಲುವು ಬಿಜೆಪಿಯದ್ದಾಯಿತು.

ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಇನ್ನು ಆರಂಭ

ವಿಶ್ವಾಸಮತ ಯಾಚನೆಯಲ್ಲಿ ಸಿಎಂ ಕುಮಾರಸ್ವಾಮಿ ಸೋತ ಹಿನ್ನೆಲೆಯಲ್ಲಿ ಸದನದಲ್ಲೇ ಬಿಜೆಪಿ ಸದಸ್ಯರು ಹರ್ಷ ವ್ಯಕ್ತಪಡಿಸಿದರು. ಬಿ ಎಸ್​ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸಂಭ್ರಮ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಬಎಸ್​ವೈ, ಇದು ಪ್ರಜಾಪ್ರಭುತ್ವದ ಗೆಲುವು. 14 ತಿಂಗಳ ಕುಮಾರಸ್ವಾಮಿ ಸರ್ಕಾರದ ಆಡಳಿತದ ನೋಡಿ ರಾಜ್ಯದ ಜನತೆ ಬೇಸತ್ತಿದ್ದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಳ್ಳಲಿದೆ. ನಾಡಿನ ಅನ್ನದಾತರ ಕಷ್ಟಕ್ಕೆ ಸ್ಪಂದಿಸುವಲ್ಲಿ ಹೆಚ್ಚು ಒತ್ತು ನೀಡುತ್ತೇನೆ ಎಂದು ಬಿಎಸ್​ವೈ ಹೇಳಿದ್ದಾರೆ.

ಗುರುವಾರ ಮುಖ್ಯಮಂತ್ರಿಯಾಗಿ ಬಿಎಸ್​ವೈ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

For All Latest Updates

TAGGED:

ABOUT THE AUTHOR

...view details