ಕರ್ನಾಟಕ

karnataka

ETV Bharat / city

ನಾಳೆ ಮಧ್ಯಾಹ್ನ ರಾಗಿಣಿ-ಸಂಜನಾ ಜಾಮೀನು ಭವಿಷ್ಯ ನಿರ್ಧಾರ - Ragini, Sanjana bail issue

ಡ್ರಗ್ಸ್​ ಜಾಲದಲ್ಲಿ ಭಾಗಿಯಾಗಿರುವ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳ ತೀರ್ಪು ಮಂಗಳವಾರ ಮಧ್ಯಾಹ್ನ 2.30ಕ್ಕೆ ಪ್ರಕಟಿಸುವ ಸಾಧ್ಯತೆ ಇದೆ.

banglore
ರಾಗಿಣಿ, ಸಂಜನಾ ಜಾಮೀನು ವಿಚಾರ

By

Published : Nov 2, 2020, 9:27 PM IST

ಬೆಂಗಳೂರು: ಸ್ಯಾಂಡಲ್​​ವುಡ್ ಡ್ರಗ್ಸ್​ ಜಾಲದಲ್ಲಿ ಭಾಗಿಯಾಗಿರುವ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳ ತೀರ್ಪುನ್ನು ಹೈಕೋರ್ಟ್ ಮಂಗಳವಾರ ಪ್ರಕಟಿಸುವ ಸಾಧ್ಯತೆ ಇದೆ.

ಈಗಾಗಲೇ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಏಕ ಸದಸ್ಯ ಪೀಠ, ಅರ್ಜಿದಾರರು ಮತ್ತು ಪ್ರಾಸಿಕ್ಯೂಷನ್ ಪರ ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದೆ. ಮಂಗಳವಾರ ಮಧ್ಯಾಹ್ನ 2.30ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ಹೀಗಾಗಿ ನಟಿಯರಿಬ್ಬರಿಗೆ ಜಾಮೀನು ಸಿಗಲಿದೆಯೋ ಅಥವಾ ಜೈಲು ವಾಸ ಮುಂದುವರೆಯಲಿದೆಯೋ ಎಂಬುದು ನಾಳೆ ಮಧ್ಯಾಹ್ನ ನಿರ್ಧಾರವಾಗಲಿದೆ.

ABOUT THE AUTHOR

...view details