ಬೆಂಗಳೂರು: ಕೇಂದ್ರದ ಪೌರತ್ವ ಕಾಯ್ದೆ ಬೆಂಬಲಿಸಿ ಟೌನ್ ಹಾಲ್‌ನಲ್ಲಿ ನಡೆದ ಜನಜಾಗೃತಿ ಕಾರ್ಯಕ್ರಮ ಮುಗಿಸಿ ಹೊರಟವನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ ನಡೆದಿದೆ.
ಜನಜಾಗೃತಿ ಕಾರ್ಯಕ್ರಮ ಮುಗಿಸಿ ಜೆ.ಸಿ.ನಗರ ರಸ್ತೆ ಮೂಲಕ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದ ವರುಣ್ ಎಂಬ ಯುವಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಯುವಕನ ತಲೆಭಾಗ ಹಾಗೂ ಬೆನ್ನಿಗೆ ಚಾಕುವಿನಿಂದ ಇರಿದಿದ್ದಾರೆ. ಗಾಯಗೊಂಡ ವರುಣ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.