ಬೆಂಗಳೂರು: ನಗರದ ಕೋರಮಂಗಲ ಪೊಲೀಸ್ ಕ್ವಾರ್ಟರ್ಸ್ನಲ್ಲಿರುವ ಸುಮಾರು 80ಕ್ಕೂ ಅಧಿಕ ಪೊಲೀಸ್ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿದೆ.
ಸಿಎಆರ್ ಸೌತ್ನ 80 ಮಂದಿ ಪೊಲೀಸ್ ಹಾಗೂ ಕುಟುಂಬಸ್ಥರಿಗೆ ಕೊರೊನಾ ಪಾಸಿಟಿವ್ - ಬೆಂಗಳೂರು ಸಶಸ್ತ್ರ ಮೀಸಲು ಪಡೆ ಪೊಲೀಸರಿಗೆ ಕೊರೊನಾ
ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದ ಕೋರಮಂಗಲ ಮತ್ತು ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್ನ 1200 ಸಿಬ್ಬಂದಿಯ ವರದಿ ಬಂದಿದ್ದು, ಈವರೆಗೆ ಸುಮಾರು 90 ಕ್ಕೂ ಅಧಿಕ ಪೊಲೀಸರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.
ಕೋರಮಂಗಲ ಹಾಗೂ ಆಡುಗೋಡಿ ಪೊಲೀಸ್ ಕ್ವಾರ್ಟರಸ್ಗಳಲ್ಲಿ ಸುಮಾರು 1200 ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ನಗರ ದಕ್ಷಿಣ ವಿಭಾಗದ ಸಶಸ್ತ್ರ ಮೀಸಲು ಪಡೆ (ಸಿಎಆರ್) ಡಿಸಿಪಿ ಯೊಗೇಶ್, 732 ಸಿಬ್ಬಂದಿಗೆ ಸಾಮೂಹಿಕವಾಗಿ ಕೊರೊನಾ ಸ್ವ್ಯಾಬ್ ಟೆಸ್ಟ್ ಮಾಡಲು ಸೂಚಿಸಿದ್ದರು. ಸದ್ಯ ಪರೀಕ್ಷಾ ವರದಿ ಬಹಿರಂಗವಾಗಿದ್ದು ಈವರೆಗೂ 80ಕ್ಕಿಂತ ಹೆಚ್ಚು ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗೆ ಸೋಂಕು ತಗುಲಿರುವುದು ಧೃಡಫಟ್ಟಿದೆ.
ವೈರಸ್ ತಗುಲಿದವರ ಪೈಕಿ ಬಹುತೇಕರಿಗೆ ಸೋಂಕಿನ ಲಕ್ಷಣ ಕಂಡು ಬಂದಿಲ್ಲ. ಸದ್ಯ ಇವರನ್ನು ಹೋಮ್ ಕ್ವಾರಂಟೈನ್ಗೆ ಒಳಪಡುವಂತೆ ಸೂಚಿಸಲಾಗಿದೆ. ಸೋಂಕಿತರಿಗೆ ರವಿಶಂಕರ್ ಗೂರೂಜಿ ಆಶ್ರಮ ಹಾಗೂ ಯಲಹಂಕದ ಜೆಕೆವಿಕೆಯ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.