ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಜನವರಿ 23,24 ರಂದು ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಹಾಗೂ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆಂದು ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್ನ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಂದ ಜ. 23,24 ರಂದು 'ಬೆಂಗಳೂರು ಚಲೋ' - ಬೆಂಗಳೂರು ಸುದ್ದಿ
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಜನವರಿ 23,24 ರಂದು ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಹಾಗೂ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆಂದು ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್ನ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಎಐಟಿಯುಸಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಎರಡು ದಿನದ ಪ್ರತಿಭಟನೆ ಹಮ್ಮಿಕೊಂಡಿದ್ದು,ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಬರಲಿದ್ದಾರೆ ಎಂದರು. ಪ್ರತಿಭಟನೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ ಹಾಗೂ ಯುಕೆಜಿಯನ್ನ ಆರಂಭಿಸಬೇಕು. ಪಠ್ಯಪುಸ್ತಕ, ಸಮವಸ್ತ್ರ, ಟಿಸಿ ಕೊಡಬೇಕು. ಹಾಗೆಯೇ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರಿಗೆ ಕೆಲಸದ ಭದ್ರತೆ ಕೊಡಬೇಕು.
ಅಲ್ಲದೇ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯಕರನ್ನ ಕೊಡಬೇಕು. ನಿವೃತ್ತಿಯಾಗಿರುವ ಕಾರ್ಯಕರ್ತರಿಗೆ ಹಿಡುಗಂಟು, ನಿವೃತ್ತಿ ವೇತನ ಹತ್ತು ಸಾವಿರ ರೂ. ನೀಡಬೇಕು ಎಂಬ ಬೇಡಿಕೆಗಳನ್ನ ಮುಂದಿಟ್ಟು ಪ್ರತಿಭಟನೆ ನಡೆಸಲಿದ್ದಾರೆ.