ಕರ್ನಾಟಕ

karnataka

ETV Bharat / city

ಅಮಿತ್ ಶಾ ಮನವಿಗೆ ಸ್ಪಂದಿಸಿ ಪ್ರತಿಭಟನೆ ಕೈಬಿಟ್ಟ ಬೆಂಗಳೂರಿನ ವೈದ್ಯರು! - ಐಎಂಎ ಕಾರ್ಯದರ್ಶಿ ಡಾ. ಶ್ರೀನಿವಾಸ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮೇರೆಗೆ ಪ್ರತಿಭಟನೆ ವಾಪಸ್ ಪಡೆಯುವುದಾಗಿ ರಾಜ್ಯ ಐಎಂಎ ಕಾರ್ಯದರ್ಶಿ ಡಾ. ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

Bangalore: Doctors who responded to Amit Shah's request
ಬೆಂಗಳೂರು: ಅಮಿತ್ ಶಾ ಮನವಿಗೆ ಸ್ಪಂದಿಸಿ ಪ್ರತಿಭಟನೆ ಕೈ ಬಿಟ್ಟ ವೈದ್ಯರು..!

By

Published : Apr 22, 2020, 5:43 PM IST

ಬೆಂಗಳೂರು:ದೇಶಾದ್ಯಂತ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಯುತ್ತಿದ್ದು, ಇದನ್ನು ಖಂಡಿಸಿ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಲು ಮುಂದಾಗಿದ್ದ ವೈದ್ಯರು ಅದರಿಂದ ಹಿಂದೆ ಸರಿದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮೇರೆಗೆ ಪ್ರತಿಭಟನೆ ವಾಪಸ್ ಪಡೆದಿದ್ದಾರೆ.‌ ಈ ಸಂದರ್ಭದಲ್ಲಿ ವೈದ್ಯರು ಪ್ರತಿಭಟನೆ ಮಾಡಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವಕ್ಕೆ ಧಕ್ಕೆ ಬರಲಿದೆ. ವೈದ್ಯರ ಮೇಲೆ ಹಲ್ಲೆ ನಡೆಸುವವರ ಮೇಲೆ ಕ್ರಮ ಜರುಗಿಸಲಾಗುತ್ತಿದೆ. ಹೀಗಾಗಿ ಪ್ರತಿಭಟನೆ ವಾಪಸ್ ಪಡೆಯುವಂತೆ ಮನವಿ‌ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮೇರೆಗೆ ಪ್ರತಿಭಟನೆ ವಾಪಸ್ ಪಡೆಯುವುದಾಗಿ ರಾಜ್ಯ ಐಎಂಎ ಕಾರ್ಯದರ್ಶಿ ಡಾ. ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details