ಬೆಂಗಳೂರು: ಬಾಂಗ್ಲಾದೇಶ ಹಾಗೂ ಪಶ್ಚಿಮ ಬಂಗಾಳದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ನಗರದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ದಂಧೆ ನೆಡೆಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ನೌಷಾದ್ ಅಲಿ, ರಿಯಾಜುಲ್ ಶೇಖ್, ಸಮೀರ್ ಬಂಧಿತ ಆರೋಪಿಗಳು.
ವಿದೇಶದಿಂದ ಮಹಿಳೆಯರನ್ನು ಕಳ್ಳಸಾಗಾಣೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೆರೆಗೆ ದಾಳಿ ನಡೆಸಿದ ಅಧಿಕಾರಿಗಳು ಮೂವರು ಮಧ್ಯವರ್ತಿಗಳನ್ನ ಬಂಧಿಸಿದ್ದಾರೆ. ಇಬ್ಬರು ಬಾಂಗ್ಲಾ ದೇಶದ ಮಹಿಳೆಯರನ್ನು ರಕ್ಷಿಸಲಾಗಿದೆ. ನಕಲಿ ಆಧಾರ್ ಕಾರ್ಡ್ ಕೊಟ್ಟು ಬಾಡಿಗೆ ಮನೆ ಗಿಟ್ಟಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನುವ ಮಾಹಿತಿ ದೊರೆತಿದೆ.
ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರಿಂದ 11 ನಕಲಿ ಆಧಾರ್ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ.