ಕರ್ನಾಟಕ

karnataka

ETV Bharat / city

ಕಾನೂನಿನ ಮುಂದೆ ಯಾರು ದೊಡ್ಡವರಲ್ಲ: ಎಡಿಜಿಪಿ ಬಂಧನ ಬೆನ್ನಲೇ ಐಪಿಎಸ್ ಅಧಿಕಾರಿ ಡಿ.ರೂಪಾ ಟ್ವೀಟ್

ಪಿಎಸ್​ಐ ನೇಮಕಾತಿ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪಾಲ್​ ಬಂಧನದ ನಂತರ ಕಾನೂನಿನಗಿಂತ ಮುಂದೆ ಯಾರು ದೊಡ್ಡವರಲ್ಲ ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ಟ್ವೀಟ್ ಮಾಡಿದ್ದಾರೆ.

IPS officer D Roopa s tweet after ADGP s arrest
ಐಪಿಎಸ್ ಅಧಿಕಾರಿ ಡಿ.ರೂಪಾ ಟ್ವೀಟ್

By

Published : Jul 4, 2022, 9:33 PM IST

ಬೆಂಗಳೂರು: ಹೈಕೋರ್ಟ್ ಚಾಟಿ ಬೀಸಿದ ಬಳಿಕ ಒಂದೇ ದಿನದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಎಸಿಬಿ ಹಾಗೂ ಸಿಐಡಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಎಡಿಜಿಪಿ ಅಮೃತ್ ಪಾಲ್​ ಬಂಧಿಸುವ ಹೊಸ ಸಂಚಲನ ಮೂಡಿಸಿದ್ದ ಬೆನ್ನಲ್ಲೇ ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನ‌ ಎಸಿಬಿ ಬಂಧಿಸಿದೆ‌. ಈ ನಡುವೆ ಐಪಿಎಸ್ ಅಧಿಕಾರಿ ರೂಪಾ 'ಕಾನೂನಿನಗಿಂತ ಯಾರು ದೊಡ್ಡವರಲ್ಲ' ಎಂದು ಟ್ವೀಟ್ ಮಾಡಿದ್ದಾರೆ.

ಐಪಿಎಸ್ ಅಧಿಕಾರಿ ಡಿ.ರೂಪಾ ಟ್ವೀಟ್

ಐಪಿಎಸ್ ಅಧಿಕಾರಿಗಳ ಮೇಲೆ ಯಾವುದೇ ಶಿಸ್ತುಕ್ರಮ ಆಗುವುದಿಲ್ಲ ಎಂದು ಬಹಳಷ್ಟು ಜನ ನನಗೆ ಹೇಳ್ತಾ ಇದ್ದದ್ದು ಸುಳ್ಳು ಎಂಬುದು ಇಂದಿನ ಬಂಧನ ತೋರಿಸಿಕೊಟ್ಟಿದೆ. ಮೊದಲ ಬಾರಿಗೆ ರಾಜ್ಯದಲ್ಲಿ ನಡೆದ ಎಡಿಜಿಪಿ ಹುದ್ದೆಯ ಐಪಿಎಸ್ ಅಧಿಕಾರಿ ಬಂಧನವೇ ಇದಕ್ಕೆ ಸಾಕ್ಷಿ. ಕಾನೂನಿನ ಮುಂದೆ ಎಲ್ಲರೂ ಒಂದೇ. ಅಖಿಲ ಭಾರತ ಸಿವಿಲ್ ಸೇವಾ ನಿಯಮದಡಿ ಬಂಧನ ಆದರೆ ಸಸ್ಪೆಂಡ್ ಕೂಡ ಮಾಡಲೇಬೇಕಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

ಪಿಎಸ್ಐ ನೇಮಕಾತಿ ಮರುಪರೀಕ್ಷೆ ನಿರ್ಧಾರದ ಮೂಲಕ ನೊಂದ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರವು ನ್ಯಾಯ ಒದಗಿಸಿದೆ. ನೇಮಕಾತಿ ಉಸ್ತುವಾರಿ ಹೊತ್ತಿರುವ ಹಿರಿಯ ಅಧಿಕಾರಿಗಳಿಂದ ಹಿಡಿದು suspension ಮುಂತಾದ ಶಿಸ್ತು ಕ್ರಮ(ಟ್ರಾನ್ಸ್‌ಫರ್ ಶಿಸ್ತುಕ್ರಮ ಅಲ್ಲ) ಆದಾಗ ಮಾತ್ರ ಮುಂದೆ ಇಂತಹ ಘಟನೆ ತಡೆಯಲು ಸಾಧ್ಯ. ಇಲ್ಲವಾದಲ್ಲಿ ಅಧಿಕಾರಿಗಳು ಆಡಿದ್ದೇ ಆಟ ಎಂದು ಟ್ವೀಟ್ ಮಾಡಿದ್ದಾರೆ ಎಂದು ತಮ್ಮ ಟ್ವಿಟ್​ ಖಾತೆಯಲ್ಲಿ ಬರೆದು ಕೊಂಡಿದ್ದಾರೆ.

ಇದನ್ನೂ ಓದಿ:ಪಿಎಸ್ಐ ನೇಮಕಾತಿ ಪ್ರಕರಣ: ಹಿರಿಯ ಐಪಿಎಸ್ ಅಧಿಕಾರಿ ಅರೆಸ್ಟ್, 10 ಪೊಲೀಸ್ ಕಸ್ಟಡಿಗೆ​

For All Latest Updates

ABOUT THE AUTHOR

...view details