ಬೆಂಗಳೂರು :ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆಯ ನಂತರ ಸಾಕಷ್ಟು ರಸ್ತೆಗಳು ಬಾಯ್ಬಿಟ್ಟಿವೆ. ಇದರಿಂದ ಹಲವಾರು ಅಪಘಾತ ಸಂಭವಿಸಿ ಪ್ರಾಣಾಹುತಿ ಪಡೆದುಕೊಳ್ಳುತ್ತಿವೆ.
ರಸ್ತೆ ಗುಂಡಿಗಳನ್ನು ಮುಚ್ಚಿಸದ ಬಿಬಿಎಂಪಿಯ ವಿರುದ್ಧ ನಗರದಲ್ಲಿ ಜನರು ರಸ್ತೆಗುಂಡಿಗಳ ಸುತ್ತ ರಂಗೋಲಿ ಹಾಕಿ, ಹೂವಿನಿಂದ ಅಲಂಕರಿಸಿ, ಆರತಿ ಮಾಡಿ ಪೂಜೆ ಸಲ್ಲಿಸುವುದರ ಮೂಲಕ ವಿನೂತನವಾಗಿ ಪ್ರತಿಭಟಿಸಿ ಗಮನ ಸೆಳೆದರು.
ಗುಂಡಿದೇವರಿಗೆ ಹೂವಿನಲಂಕಾರ, ಆರತಿ
ನಗರದ ಕಾಕ್ಸ್‌ಟೌನ್ ಚಾರ್ಲ್ಸ್ ಕಾಂಪ್ಬೆಲ್ ಮುಖ್ಯ ರಸ್ತೆಯಲ್ಲಿ ಜನರು ಈ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಗುಂಡಿದೇವರಿಗೆ ಹೋಮ ಮಾಡುವ ಮೂಲಕ ವಾಹನ ಸವಾರರ ಹಿತಕ್ಕಾಗಿ ಸಾರ್ವಜನಿಕರು ಬೇಡಿಕೊಂಡರು. ರಸ್ತೆ ಗುಂಡಿ ಮುಚ್ಚದಿದ್ದರೆ ಪಾಲಿಕೆ ವಿರುದ್ಧ ತೀವ್ರ ಹೋರಾಟದ ಎಚ್ಚರಿಕೆಯನ್ನು ಈ ಸಂದರ್ಭದಲ್ಲಿ ನೀಡಲಾಯಿತು.