ಕರ್ನಾಟಕ

karnataka

ETV Bharat / city

ಹೆಚ್ಚಿದ ಆತಂಕ: ಬೆಂಗಳೂರಿನ ಪೊಲೀಸ್ ಕಾನ್ಸ್​ಟೇಬಲ್​​ಗೆ ಕೊರೊನಾ ಪಾಸಿಟಿವ್​! - ಬೆಂಗಳೂರಿನ ಪೊಲೀಸ್ ಕಾನ್ಸ್​ಟೇಬಲ್​​ಗೆ ಕೊರೊನಾ

ಪಾದರಾಯನಪುರ ಗಲಭೆ ಬಳಿಕ‌ ಕೊರೊನಾ ಸೋಂಕು ಕಾಣಿಸಿಕೊಂಡಿರಬಹುದು ಎಂದು ಗಲಾಟೆ ವೇಳೆ ಕರ್ತವ್ಯ ನಿರ್ವಹಿಸಿದ್ದ ಪೊಲೀಸರಿಗೆ ಆತಂಕ ಮನೆ ಮಾಡಿತ್ತು. ಮುಂಜಾಗ್ರತಾ ಕ್ರಮವಾಗಿ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಎಂದು ಬರುತ್ತಿದ್ದಂತೆ ಪೊಲೀಸರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು‌.

Corona virus
ಕೊರೊನಾ

By

Published : May 4, 2020, 7:35 PM IST

ಬೆಂಗಳೂರು: ಇದೇ ಮೊದಲ ಬಾರಿಗೆ ನಗರದ‌ ಪೊಲೀಸ್ ಪೇದೆಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದು ನಗರದ ಪೊಲೀಸರ ಆತಂಕಕ್ಕೆ ಕಾರಣವಾಗಿದೆ.

ಹೌದು, ಹಗಲಿರುಳೆನ್ನದೆ ಸಾರ್ವಜನಿಕರ ಹಿತಕ್ಕಾಗಿ ಶ್ರಮಿಸಿದ ಬೇಗೂರು ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​ಗೆ ಕೊರೊನಾ ಸೋಂಕು ದೃಢವಾಗಿರುವುದು‌‌ ಪರೀಕ್ಷೆಯಲ್ಲಿ ಖಚಿತವಾಗಿದೆ.

ಪೊಲೀಸ್ ಕಾನ್ಸ್​ಟೇಬಲ್​​ಗೆ ಕೊರೊನಾ

ಅನಾರೋಗ್ಯ ಕಾರಣ ಕಾನ್ಸ್​ಟೇಬಲ್​ ಕಳೆದ 20 ದಿನಗಳಿಂದ ರಜೆಯಲ್ಲಿದ್ದರು. ರಜೆ ಮುಗಿಸಿ ನಿನ್ನೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮುಂಜಾಗ್ರತ ಕ್ರಮವಾಗಿ ಕೊರೊನಾ ಟೆಸ್ಟ್ ನಡೆಸಿದಾಗ ಪಾಸಿಟಿವ್ ಎಂದು ವರದಿ ಬಂದಿದೆ. ಈ ಸಂಬಂಧ ಕಾನ್ಸ್​ಟೇಬಲ್​ರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿದ್ದು.‌ ಪ್ರಾಥಮಿಕ ಸಂಪರ್ಕದಲ್ಲಿರುವ ಸುಮಾರು 25 ವ್ಯಕ್ತಿಗಳನ್ನು ಗುರುತಿಸಿ ಕ್ವಾರಂಟೈನ್​ಗೆ ಒಳಪಡಿಸುವ ಕೆಲಸವಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ABOUT THE AUTHOR

...view details