ಬೆಂಗಳೂರು: ಶಾಕಾಂಬರಿನಗರ ಹಾಗೂ ಬನಶಂಕರಿ ನಗರದ ಎರಡೂ ವಾರ್ಡ್ಗಳಲ್ಲಿ ಹೆಚ್ಚೆತ್ತು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಸಾರಕ್ಕಿ ಮಾರುಕಟ್ಟೆಯನ್ನು ಬಂದ್ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಕಾವು: ಸಾರಕ್ಕಿ ಮಾರುಕಟ್ಟೆ ಬಂದ್
ಮಹಾನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸಾರಕ್ಕಿ ಮಾರುಕಟ್ಟೆಯನ್ನು ಬಂದ್ ಮಾಡಿ ಬಿಬಿಎಂಪಿ ಆದೇಶಿಸಿದೆ.
ಬಿಬಿಎಂಪಿ
ಸಾರಕ್ಕಿ ತೆರೆದ ಮಾರುಕಟ್ಟೆ ಹಾಗೂ ಮಳಿಗೆಗಳು, ಬನಶಂಕರಿ ದೇವಸ್ಥಾನದಿಂದ ಸಾರಕ್ಕಿ ಗೇಟ್‌ವರೆಗಿನ ರಸ್ತೆಯ ಎರಡು ಬದಿ ಪಾದಚಾರಿ ಮಾರ್ಗದಲ್ಲಿರುವ ಬೀದಿ ವ್ಯಾಪಾರವನ್ನು ಮುಂದಿನ ಆದೇಶದವರೆಗೆ ಬಂದ್ ಮಾಡಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಬಿಬಿಎಂಪಿ, ಸಾರಕ್ಕಿ ಮಾರುಕಟ್ಟೆಯಲ್ಲಿ ಅತಿಹೆಚ್ಚು ಜನ ಸೇರುವುದರಿಂದ ಕೊರೊನಾ ಪ್ರಕರಣಗಳು ಉಲ್ಬಣವಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಮಾರುಕಟ್ಟೆಯನ್ನು ಸ್ಥಗಿತಗೊಳಿಸಿ ದಕ್ಷಿಣ ವಿಭಾಗದ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.