ಬೆಂಗಳೂರು: ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಪ್ರಮುಖ ರಸ್ತೆಗಳ ಕಾಮಗಾರಿಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತ ವಂದಿತಾ ಶರ್ಮ, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಪರಿವೀಕ್ಷಿಸಿದರು.
ಬೆಂಗಳೂರು ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿ ಪರಿಶೀಲಿಸಿದ ಅಧಿಕಾರಿಗಳು - ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆ
ಇನ್ಫ್ಯಾಂಟ್ರಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಡಿಕೆನ್ ಸನ್ ರಸ್ತೆ, ಬ್ರಿಗೇಡ್ ರಸ್ತೆ, ಪ್ಯಾಲೇಸ್ ರೋಡ್, ಮಿಲ್ಲರ್ ರಸ್ತೆ ಮತ್ತು ಕಸ್ತೂರಬಾ ರಸ್ತೆಗಳಲ್ಲಿ ನಡೆಯುತ್ತಿರುವ ಪಾದಚಾರಿ ಮಾರ್ಗ ಮತ್ತು ರಸ್ತೆ ಕಾಮಗಾರಿಗಳನ್ನು ಖುದ್ದಾಗಿ ಭೇಟಿ ನೀಡಿ ಅಧಿಕಾರಿಗಳು ಪರಿಶೀಲಿಸಿದರು.
Bangalore Smart City Various Works Inspection by Officers
ಇನ್ಫ್ಯಾಂಟ್ರಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಡಿಕೆನ್ ಸನ್ ರಸ್ತೆ, ಬ್ರಿಗೇಡ್ ರಸ್ತೆ, ಪ್ಯಾಲೇಸ್ ರೋಡ್, ಮಿಲ್ಲರ್ ರಸ್ತೆ ಮತ್ತು ಕಸ್ತೂರಬಾ ರಸ್ತೆಗಳಲ್ಲಿ ನಡೆಯುತ್ತಿರುವ ಪಾದಚಾರಿ ಮಾರ್ಗ ಮತ್ತು ರಸ್ತೆ ಕಾಮಗಾರಿಗಳನ್ನು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಮಳೆಗಾಲದ ಆರಂಭದೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಇಂಟಿಗ್ರೇಟೆಡ್ ಮೊಬಿಲಿಟಿ ಹಬ್ ಮತ್ತು ಕೆ ಆರ್ ಮಾರುಕಟ್ಟೆ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗಳು ಕೂಡ ಭರದಿಂದ ನಡೆಯುತ್ತಿದ್ದು ಅಲ್ಲಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.