ಕರ್ನಾಟಕ

karnataka

ETV Bharat / city

ಪದವಿ-ಸ್ನಾತಕೋತ್ತರ ಪದವಿ ತರಗತಿ ಆರಂಭಕ್ಕೆ ಸಜ್ಜಾದ ಬೆಂಗಳೂರು ವಿವಿ - Bangalore university degree and pg classes

ಬೆಂಗಳೂರು ವಿಶ್ವವಿದ್ಯಾಲಯದ ಕೇವಲ ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.

Bangalore university
ಬೆಂಗಳೂರು ವಿಶ್ವವಿದ್ಯಾಲಯ

By

Published : Nov 15, 2020, 5:22 PM IST

ಬೆಂಗಳೂರು:ಸರ್ಕಾರದ ಆದೇಶದಂತೆ ಬೆಂಗಳೂರು ವಿಶ್ವವಿದ್ಯಾಲಯ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಭೌತಿಕ ತರಗತಿಗಳನ್ನು ನ.17 ರಂದು ಪುನರಾರಂಭ ಮಾಡಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ.

ಈಗಾಗಲೇ ಪ್ರಾಂಶುಪಾಲರ ಹಾಗೂ ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರ ಸಭೆ ಕರೆದು, ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಹಾಗೂ ತರಗತಿ ಆರಂಭಿಸಲು ಮಾಡಿಕೊಳ್ಳಬೇಕಾದ ವ್ಯವಸ್ಥೆಯ ಕುರಿತು ಪರಿಶೀಲಿಸಲಾಗಿದೆ. ‌ಈ ಸಂಬಂಧ ಮಾಹಿತಿ ನೀಡಿರುವ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್. ವೇಣುಗೋಪಾಲ್, ಈಗಾಗಲೇ ಯುಜಿಸಿ, ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ಎಸ್​ಒಪಿ ಪ್ರಕಟಿಸಲಾಗಿದೆ. ಅದನ್ನು ಅನುಷ್ಠಾನಗೊಳಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್-19 ಸೋಂಕು ಹರಡದಂತೆ ತಡೆಯಲು ತರಗತಿಗಳನ್ನು ಆಯೋಜಿಸಲು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸಜ್ಜುಗೊಳಿಸಲು 5 ಕಾರ್ಯಾಚರಣಾ ತಂಡಗಳನ್ನು ರೂಪಿಸಿಲಾಗಿದೆ. ಪ್ರತಿ ತಂಡಗಳು ಸತತವಾಗಿ ಶೈಕ್ಷಣಿಕ ಚಟುವಟಿಕೆಗಳನ್ನು ನಿರ್ವಹಣೆ ಹಾಗೂ ಮೇಲ್ವಿಚಾರಣೆ ಮಾಡಲಿವೆ ಅಂತ ತಿಳಿಸಿದರು.

ಕೇವಲ ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಒಟ್ಟು ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಸೂಚನೆ ನೀಡಲಾಗಿದೆ. ‌

ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಪೋಷಕರಿಂದ ನಿಗದಿತ ನಮೂನೆಯಲ್ಲಿ ಒಪ್ಪಿಗೆ ಪತ್ರ ಪಡೆಯಲು ಸಹ ಸೂಚಿಸಲಾದೆ. ಅಂತಿಮ ವರ್ಷ ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳಿಗೆ ಆನ್​ಲೈನ್ ತರಗತಿಗಳನ್ನು ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಕಾಲೇಜು ಕಟ್ಟಡಗಳನ್ನು ಶೌಚಾಲಯ, ತರಗತಿ ಕೊಠಡಿಗಳು, ಪ್ರಯೋಗಾಲಯಗಳು ಇತ್ಯಾದಿಗಳನ್ನು ಈಗಾಗಲೇ ಸ್ಯಾನಿಟೈಸ್ ಮಾಡಿಸಲಾಗಿದೆ. ತರಗತಿಗಳು ಆರಂಭದ ನಂತರ ನಿಗದಿತ ಸಮಯದಲ್ಲಿ ಸ್ಯಾನಿಟೈಸ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಬೋಧಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಮೂರು ದಿನಗಳ ಮುಂಚಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ತರಗತಿಗಳಿಗೆ ಹಾಜರಾಗಲು ಸೂಚಿಸಲಾಗಿದೆ. ವಿದ್ಯಾರ್ಥಿಗಳಿಗೆ ಬೋಧಕರಿಗೆ ಹಾಗೂ ಇತರ ಸಿಬ್ಬಂದಿಗಳಲ್ಲಿ ಜಾಗೃತಿ ಮೂಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details