ಬೆಂಗಳೂರು: ಕೋವಿಡ್ ಲಸಿಕಾ ಮಹಾ ಅಭಿಯಾನದಲ್ಲಿ 2 ಲಕ್ಷ 9 ಸಾವಿರದ 265 ಮಂದಿಗೆ ಲಸಿಕೆ ನೀಡುವ ಮೂಲಕ ಇಡೀ ದೇಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂಬರ್ 1 ಸ್ಥಾನ ಪಡೆದುಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಲಸಿಕೆ ವಿತರಣೆಯಲ್ಲಿ ಬೆಂ.ನಗರ ಜಿಲ್ಲೆ ನಂಬರ್ 1; ಆರೋಗ್ಯ ಸಚಿವ ಡಾ.ಕೆ.ಸುಧಾಕರ್ - ಬೆಂಗಳೂರು
ಕೋವಿಡ್ ಸೋಂಕು ತಡೆಯಲು ದೇಶಾದ್ಯಂತ ಕೊರೊನಾ ಲಸಿಕೆ ಉಚಿತವಾಗಿ ನೀಡಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ನಿನ್ನೆ ಹಮ್ಮಿಕೊಂಡಿದ್ದ ಲಸಿಕಾ ವಿತರಣೆ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆ ಇಡೀ ದೇಶದಲ್ಲೇ ನಂಬರ್ ಒನ್ ಸ್ಥಾನ ಪಡೆದಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಮಾತನಾಡಿದ ಅವರು, 2,01,339 ಡೋಸ್‌ಗಳನ್ನು ನೀಡಿರುವ ಇಂದೋರ್ 2ನೇ ಸ್ಥಾನದಲ್ಲಿ ಎಂದು ಹೇಳಿದರು. ಈವರೆಗೆ ನೀಡಿರುವ ಕೋವಿಡ್ ಲಸಿಕೆ ಪ್ರಮಾಣದಲ್ಲೂ ಬೆಂಗಳೂರು ಇಡೀ ದೇಶದಲ್ಲೇ ಅಗ್ರಸ್ಥಾನದಲ್ಲಿ. ಜೂನ್ 21ರ ವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಇಲ್ಲಿಯ ತನಕ 52,88,684 ವ್ಯಾಕ್ಸಿನೇಷನ್ ಮಾಡಲಾಗಿದೆ ಎಂದರು.
ದೇಶದಲ್ಲಿ ಜನವರಿ 16ರಿಂದ ವ್ಯಾಕ್ಸಿನೇಷನ್ ಡ್ರೈವ್ ಆರಂಭಗೊಂಡಿದ್ದು, ಇದೇ ಮೊದಲ ಸಲ ಅತಿ ಹೆಚ್ಚಿನ ಪ್ರಮಾಣದಲ್ಲಿ ವ್ಯಾಕ್ಸಿನ್ ನೀಡಲಾಗಿದೆ. ನಿನ್ನೆ ಒಂದೇ ದಿನ 80 ಲಕ್ಷ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ. ಇಲ್ಲಿಯವರೆಗೆ 28.7 ಕೋಟಿ ಜನರಿಗೆ ಲಸಿಕೆ ನೀಡಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.