ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿದ ನಗರ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ನೇತೃತ್ವದ ತಂಡ, ಕೈದಿಗಳ ಬಳಿಯಿದ್ದ ಹಣ ಹಾಗೂ ಮಾದಕವಸ್ತುಗಳನ್ನು ಜಪ್ತಿ ಮಾಡಿದೆ.
ಸಿಸಿಬಿ ಡಿಸಿಪಿ ಗಿರೀಶ್ , ಕೇಂದ್ರ ವಲಯ ಡಿಸಿಪಿ ದೇವರಾಜ್, ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ, ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್, ವೈಟ್‌ಫೀಲ್ಡ್ ಡಿಸಿಪಿ ಅಬ್ದುಲ್ ಅಹದ್, ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂತ್ ಸೇರಿ 40 ಪೊಲೀಸ್ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗ್ತಿದೆ.