ಕರ್ನಾಟಕ

karnataka

ಬಸವ ಜಯಂತಿ, ರಂಜಾನ್ ಹಬ್ಬಕ್ಕೆ ಶುಭ ಕೋರಿದ ಸಿಎಂ ಬೊಮ್ಮಾಯಿ, ಹೆಚ್‌ಡಿಡಿ, ಹೆಚ್‌ಡಿಕೆ

By

Published : May 3, 2022, 10:19 AM IST

ಬಸವ ಜಯಂತಿ ಹಾಗೂ ಪವಿತ್ರ ರಂಜಾನ್ ಪ್ರಯುಕ್ತ ನಾಡಿನ ಜನತೆಗೆ ರಾಜಕೀಯ ಗಣ್ಯರು ಶುಭಾಶಯ ಸಲ್ಲಿಸಿದ್ದಾರೆ.

ramzan-and-basava-jayanthi-wishes-from-cm-bommai-hdk-hdd
ನಾಡಿನ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ, ಹೆಚ್ ಡಿಡಿ, ಹೆಚ್ ಡಿಕೆ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಶುಭಾಶಯಗಳು. ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತಾ, ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಮಹಾನ್ ಮಾನವತಾವಾದಿ ಅಣ್ಣ ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ. ಜೊತೆಗೆ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್​ಡಿಕೆ, "ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ - ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ ಎಂದು ವಚನದ ಮೂಲಕ ಶುಭಾಶಯ ಕೋರಿದ್ದಾರೆ. ಅದೇ ರೀತಿ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್-ಉಲ್-ಫಿತರ್ (ಪವಿತ್ರ ರಂಜಾನ್) ಹಬ್ಬದ ಹಾರ್ದಿಕ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ :ಡಿ.ಕೆ.ಶಿವಕುಮಾರ್​ ಭೇಟಿ ಮಾಡಿದ ಫ್ರೆಂಚ್ ಕೌನ್ಸಿಲರ್ ಜನರಲ್

ABOUT THE AUTHOR

...view details