ಕರ್ನಾಟಕ

karnataka

ETV Bharat / city

ಅವಹೇಳನಕಾರಿ ಹೇಳಿಕೆ: ನಟ ಚೇತನ್ ವಿರುದ್ಧ ಚಾರ್ಜ್​​​​ಶೀಟ್ ಸಲ್ಲಿಕೆಗೆ ಅನುಮತಿ ಕೇಳಿದ ಪೊಲೀಸರು - ಬ್ರಾಹ್ಮಣ ಸಮುದಾಯದ ವಿರುದ್ಧ ಚೇತನ್ ಹೇಳಿಕೆ

ಚೇತನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಬಸವನಗುಡಿ ಪೊಲೀಸರು ಸರ್ಕಾರದ ಅನುಮತಿ ಕೋರಿ ಪತ್ರ ಬರೆದಿದ್ದಾರೆ.

actor chethan
ನಟ ಚೇತನ್

By

Published : Mar 5, 2022, 10:25 AM IST

ಬೆಂಗಳೂರು: ನಟ, ಸಾಮಾಜಿಕ ಹೋರಾಟಗಾರ ಚೇತನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಬಸವನಗುಡಿ ಪೊಲೀಸರು ಸರ್ಕಾರದ ಅನುಮತಿ ಕೋರಿ ಪತ್ರ ಬರೆದಿದ್ದಾರೆ. ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಚೇತನ್ ವಿರುದ್ಧ ಕಳೆದ ವರ್ಷ ಜೂನ್ 10ರಂದು ವಿಪ್ರ ಯುವ ವೇದಿಕೆಯ ಅಧ್ಯಕ್ಷ ಪವನ್ ಕುಮಾರ್ ಶರ್ಮಾ ಬಸವನಗುಡಿ ಠಾಣೆಗೆ ದೂರು ನೀಡಿದ್ದರು.

ದೂರಿನನ್ವಯ ಐಪಿಸಿ ಸೆಕ್ಷನ್ 153 (ಎರಡು ಸಮುದಾಯಗಳ ನಡುವೆ ಕೋಮು ಭಾವನೆ ಉಂಟುಮಾಡುವ ಮೂಲಕ ಗಲಭೆಗೆ ಪ್ರಚೋದನೆ) ನಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದರು. ವಿಚಾರಣೆಗೆ ಹಾಜರಾದಾಗಲೂ ಸಹ ಚೇತನ್ ಬೆಂಬಲಿಗರು ಠಾಣೆ ಬಳಿ ಜಮಾಯಿಸಿ ಕೋವಿಡ್ ನಿಯಮ ಉಲ್ಲಂಘಿಸಿರುವುದಾಗಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:'ಹಿಂದಿನ ಕಾಮಗಾರಿಗಳ ಬಿಲ್ ಬಾಕಿ ಇದೆ, ಹೊಸ ನೀರಾವರಿ ಯೋಜನೆಗಳನ್ನ ಹೇಗೆ ಕೈಗೆತ್ತಿಕೊಳ್ಳುತ್ತಾರೆ?:MBP ಪ್ರಶ್ನೆ

ಐಪಿಸಿ ಸೆಕ್ಷನ್ 153ರ ಅಡಿ ದಾಖಲಾದ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಗೆ ಸರ್ಕಾರದ ಅನುಮತಿ ಅಗತ್ಯವಿರುವುದರಿಂದ ಅನುಮತಿ ಕೋರಿ ಬಸವನಗುಡಿ ಪೊಲೀಸರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅನುಮತಿ ದೊರೆತಲ್ಲಿ ಚೇತನ್​ಗೆ ಮತ್ತೆ ಸಂಕಷ್ಟ ಎದುರಾಗಲಿದೆ.

ABOUT THE AUTHOR

...view details