ಬೆಂಗಳೂರು :ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವ ಸಚಿವ ಆನಂದ್ ಸಿಂಗ್ ಅವರನ್ನು ಖುದ್ದಾಗಿ ಹೈಕಮಾಂಡ್ ನಾಯಕರ ಭೇಟಿ ಮಾಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ. ಮುಂದಿನ ವಾರ ದೆಹಲಿಗೆ ತಮ್ಮೊಂದಿಗೆ ಆನಂದ್ ಸಿಂಗ್ ಅವರನ್ನೂ ಕರೆದೊಯ್ಯಲು ತೀರ್ಮಾಸಿದ್ದಾರೆ.
ಸಚಿವ ಆರ್ ಅಶೋಕ್ ನಿವಾಸದಲ್ಲಿ ನಡೆದ ಸಂಧಾನ ಸಭೆ ಮೂಲಕ ಸಚಿವ ಆನಂದ್ ಸಿಂಗ್ ಅಸಮಾದಾನ ಶಮನವಾದಂತಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಚರ್ಚಿಸುವ ನಿರ್ಣಯ ಕೈಗೊಳ್ಳಲಾಗಿದೆ. ಅದರಂತೆ ಆ.15ರ ನಂತರ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳುತ್ತಿದ್ದು, ತಮ್ಮ ಜೊತೆಯಲ್ಲಿ ಆನಂದ್ ಸಿಂಗ್ ಅವರನ್ನೂ ಕರೆದೊಯ್ಯಲಿದ್ದಾರೆ.
ವರಿಷ್ಠರನ್ನು ಭೇಟಿ ಮಾಡಿಸಿ ಮಾತುಕತೆ ನಡೆಸಲಿದ್ದಾರೆ. ಆನಂದ್ ಸಿಂಗ್ ಖಾತೆ ಬದಲಾವಣೆ ಕುರಿತು ಇಟ್ಟಿರುವ ಬೇಡಿಕೆ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಹೈಕಮಾಂಡ್ ನೀಡುವ ನಿರ್ಧಾರ, ಸಲಹೆ-ಸೂಚನೆಗಳ ವಿಚಾರದಲ್ಲಿ ಆನಂದ್ ಸಿಂಗ್ ಅವರಿಗೆ ಯಾವುದೇ ಗೊಂದಲ ಆಗಬಾರದು ಎನ್ನುವ ಕಾರಣಕ್ಕೆ ಅವರನ್ನೇ ಕರೆದೊಯ್ದು ಅವರ ಸಮ್ಮುಖದಲ್ಲಿ ಈ ವಿಚಾರದಲ್ಲಿ ಚರ್ಚೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ.
ಆ.15ರ ಧ್ವಜಾರೋಹಣ ಮುಗಿಸಿದ ನಂತರ ಹೈಕಮಾಂಡ್ ನಾಯಕ ಭೇಟಿಗೆ ದಿನಾಂಕ ನಿಗದಿಪಡಿಸಿಕೊಂಡು ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಆನಂದ್ ಸಿಂಗ್ ಜೊತೆ ದೆಹಲಿಗೆ ತೆರಳಲಿದ್ದಾರೆ.
ಇದನ್ನೂ ಓದಿ:ಸಂಧಾನ ಸಭೆ ಯಶಸ್ವಿ: ಆನಂದ್ ಸಿಂಗ್ ರಾಜೀನಾಮೆ ನೀಡಲ್ಲ ಎಂದ ಸಿಎಂ