ಕರ್ನಾಟಕ

karnataka

ETV Bharat / city

ಸಿಎಂ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ಬಸವರಾಜ ಹೊರಟ್ಟಿ

ಬಸವರಾಜ ಹೊರಟ್ಟಿ ಅವರು ಇಂದು ಸಿಎಂ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದರು. ರಾಜೀನಾಮೆ ಅಂಗೀಕಾರ ವಿಳಂಬವಾದ ಕಾರಣ ನಿನ್ನೆ ಬಿಜೆಪಿ ಕಚೇರಿಯಲ್ಲಿ ನಡೆಯಬೇಕಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಇಂದಿಗೆ ಮುಂದೂಡಲಾಗಿತ್ತು.

Basavaraja Horatti joined BJP today
ಸಿಎಂ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ಬಸವರಾಜ ಹೊರಟ್ಟಿ

By

Published : May 18, 2022, 10:59 AM IST

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಸವರಾಜ ಹೊರಟ್ಟಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಆರ್‌.ಟಿ.ನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಸರಳವಾಗಿ ನಡೆಯಿತು.


ಇದಕ್ಕೂ ಮುನ್ನ, ಸಿಎಂ ನಿವಾಸಕ್ಕೆ ಆಗಮಿಸಿದ ಬಸವರಾಜ್ ಹೊರಟ್ಟಿ ಅವರನ್ನು ಖುದ್ದು ಬೊಮ್ಮಾಯಿ ಅವರೇ ಸ್ವಾಗತಿಸಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ ಹಾಗು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ರಾಜ್ಯಸಭೆ ಚುನಾವಣೆ: ಜೆಡಿಎಸ್ ತಂತ್ರಗಾರಿಕೆ ಏನು?

ಸದ್ಯದಲ್ಲೇ ಮತಕ್ಷೇತ್ರದಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಪ್ರಚಾರ ಕಾರ್ಯಕ್ಕೆ ಹೊರಟ್ಟಿ ಚಾಲನೆ ನೀಡಲಿದ್ದಾರೆ. ಸಿಎಂ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಆ ಸಮಾರಂಭದಲ್ಲಿ ಭಾಗಿಯಾಗಲಿದ್ದು ಬೃಹತ್ ಸಂಖ್ಯೆಯ ಹೊರಟ್ಟಿ ಬೆಂಬಲಿಗರು ಬಿಜೆಪಿ ಸೇರಲಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

...view details