ಬೆಂಗಳೂರು: ಬಿಜೆಪಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಆಧಾರ ರಹಿತ ಆರೋಪ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ರಾಜ್ಯಪಾಲರನ್ನ ಭೇಟಿ ಮಾಡಿ ಕೇಂದ್ರ ಸಚಿವ ಅಮಿತ್ ಶಾ, ಯಡಿಯೂರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು. ನಿಮ್ಮ ಆರೋಪದಲ್ಲಿ ಯಾವುದೇ ಹುರುಳಿದೆಯಾ? ನಿಮ್ಮ ಶಾಸಕರನ್ನ ಸರಿಯಾಗಿ ಇಟ್ಟುಕೊಳ್ಳದವರು ಬಿಜೆಪಿ, ಯಡಿಯೂರಪ್ಪ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.