ಬೆಂಗಳೂರು :ರಾಜ್ಯ ಯುವಜನ ಸಬಲೀಕರಣಕ್ಕೆ ಸರ್ಕಾರ ಮಹತ್ವವನ್ನು ನೀಡಿದೆ. ನೂತನ ಯುವ ನೀತಿಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು ಸರ್ಕಾರ ಅಗತ್ಯ ನೆರವು ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಇಂದು ಆನ್ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ಅತ್ಯುತ್ತಮ ಕೋಚ್ಗಳ ಮೂಲಕ ಕ್ರೀಡಾಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ.
ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ಗಳು ಮಾಡಬೇಕಾದ ಅಗತ್ಯವಿದೆ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದರು.
72 ದೇಶಗಳ ಒಕ್ಕೂಟ ರಚನೆಯಾಗಿ ಹಲವಾರು ವಿಚಾರಗಳ ವಿನಿಮಯಕ್ಕೆ ಕಾಮನ್ವೆಲ್ತ್ ಒಕ್ಕೂಟ ವೇದಿಕೆಯಾಗಿದೆ. ಸಮಾನ ಚಿಂತನೆ ಇರುವ ರಾಷ್ಟ್ರಗಳ ಬಾಂಧವ್ಯ ಗಟ್ಟಿಗೊಳ್ಳಲು, ಅದರಲ್ಲೂ ಯುವಪೀಳಿಗೆಯಲ್ಲಿ ಬಾಂಧವ್ಯ ಮುಂದುವರೆಯಬೇಕೆಂಬ ಉದ್ದೇಶದಿಂದ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ ಎಂದರು.