ಕರ್ನಾಟಕ

karnataka

By

Published : Apr 23, 2021, 9:51 PM IST

ETV Bharat / city

ವಿದ್ಯುತ್ ಚಿತಾಗಾರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದ ಬಿಬಿಎಂಪಿ

ಈ ವಿಷಯಕ್ಕೆ ಸಂಬಂಧಿಸಿದಂತೆ ಪಾಲಿಕೆಯ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್ -19 ಸೋಂಕಿನಿಂದ ನಿಧನ ಹೊಂದುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿವೆ..

BBMP
BBMP

ಬೆಂಗಳೂರು: ಕೊರೊನಾ ಸೋಂಕಿನಿಂದ ನಿಧನ ಹೊಂದುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಬಿಬಿಎಂಪಿ ನಗರದ ಚಿತಾಗಾರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅತ್ಯವಶ್ಯಕವಾಗಿರುವುದರಿಂದ ಕೋವಿಡ್ ನಿಯಂತ್ರಣ ಮತ್ತು ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುವ ನಿಟ್ಟಿನಲ್ಲಿ ಪಾಲಿಕೆಯು ಈಗಾಗಲೇ ಹಲವಾರು ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಪಾಲಿಕೆಯ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್ -19 ಸೋಂಕಿನಿಂದ ನಿಧನ ಹೊಂದುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿವೆ.

ಇದರಿಂದ 12 ವಿದ್ಯುತ್ ಚಿತಾಗಾರಗಳಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಎರಡು ಪಾಳಿ ವ್ಯವಸ್ಥೆಯಲ್ಲಿ 12 ವಿದ್ಯುತ್ ಚಿತಾಗಾರಗಳಿಗೂ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ನೋಡಲ್ ಅಧಿಕಾರಿಗಳು ಚಿತಾಗಾರಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸುರಕ್ಷತಾ ಸಾಮಗ್ರಿಗಳು, ಅವಶ್ಯಕ ಸಲಕರಣೆಗಳನ್ನು ಒದಗಿಸುವುದು, ಚಿತಾಗಾರಕ್ಕೆ ಬರುವ ಮೃತದೇಹಗಳ ವಿವರಗಳು ಸೇರಿದಂತೆ ಮಾಹಿತಿಯನ್ನು ಪ್ರತಿ ನಿತ್ಯ ವರದಿ ನೀಡಲು ಪಾಲಿಕೆ ಸೂಚಿಸಿದೆ.

ABOUT THE AUTHOR

...view details