ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಗುರಿಯನ್ನು ಸಮರ್ಥವಾಗಿ ನಿಭಾಯಿಸಿ, ತಲುಪಬೇಕು. ಅದಕ್ಕಾಗಿ ತಂತ್ರಜ್ಞಾನ ಅಳವಡಿಕೆಗೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ವರ್ಚುಯಲ್ ಮೂಲಕ ನೆಡೆದ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ತೆರಿಗೆ ವ್ಯಾಪ್ತಿಗೆ ಬಾರದ ಆಸ್ತಿಗಳನ್ನು ಪತ್ತೆ ಮಾಡಿ ತೆರಿಗೆ ವ್ಯಾಪ್ತಿಗೆ ತರಬೇಕು. ತೆರಿಗೆ ಸಂಗ್ರಹ ಸಂಬಂಧ ಸುಧಾರಿತ ತಂತ್ರಜ್ಞಾನ ಆವಶ್ಯಕತೆ ಕಂಡು ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಟಾಪ್ ಡಿಫಾಲ್ಟರ್‌ಗಳ ಪಟ್ಟಿ ಅನುಸಾರ ತೆರಿಗೆ ವಸೂಲಿ ಮಾಡಬೇಕು ಎಂದು ಹೇಳಿದ್ದಾರೆ. ಪ್ರಸಕ್ತ ಸಾಲಿನಲ್ಲಿ 4 ಸಾವಿರ ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಈವರೆಗೆ 2,667 ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್:
ಪಾಲಿಕೆಯಲ್ಲಿ ಕಂದಾಯ ಅಧಿಕಾರಿಗಳು ಹಾಗೂ ಸಹಾಯ ಕಂದಾಯ ಅಧಿಕಾರಿಗಳು ಪರಿಣಾಮಕಾರಿಯಾಗಿ ಆಸ್ತಿ ತೆರಿಗೆ ಸಂಗ್ರಹಿಸಲು ಮುಂದಾಗಬೇಕಿದೆ. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ತಕ್ಷಣ ನೋಟಿಸ್ ನೀಡಬೇಕು ಎಂದು ತಾಕೀತು ಮಾಡಿದರು.
ಈವರೆಗಿನ ವಲಯವಾರು ಆಸ್ತಿ ತೆರಿಗೆ ಸಂಗ್ರಹದ ವಿವರ (ಕೋಟಿ ರೂ. ಗಳಲ್ಲಿ):
1. ಯಲಹಂಕ - 265.98
2. ಮಹದೇವಪುರ - 683.07