ಬೆಂಗಳೂರು:ನಗರದಲ್ಲಿ ಸಮರೋಪಾದಿಯಲ್ಲಿ ಕೋವಿಡ್ ನಿಯಂತ್ರಣದಲ್ಲಿ ತೊಡಗಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತರಿಗೇ ಕೋವಿಡ್ ಸೋಂಕು ದೃಢಪಟ್ಟಿದೆ.
ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪಾಲಿಕೆ ಮುಖ್ಯಸ್ಥ ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಷನ್ಗೆ ಒಳಪಟ್ಟಿದ್ದೇನೆ. ಸೌಮ್ಯ-ಲಕ್ಷಣ ಇರುವ ಕಾರಣ ಮನೆಯಲ್ಲಿಯೇ ಇದ್ದು, ಚಿಕಿತ್ಸೆಗೆ ಪಡೆಯುತ್ತಿದ್ದೇನೆ ಎಂದು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.