ಕರ್ನಾಟಕ

karnataka

ETV Bharat / city

ಬೆಂಗಳೂರಿನಲ್ಲಿ ಕೋವಿಡ್​ ತಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ - ಗೌರವ್ ಗುಪ್ತ - ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಕ್ರಮ

ಮುಂದಿನ ದಿನಗಳಲ್ಲಿ ಕೋವಿಡ್​ ಪ್ರಕರಣಗಳು ಮತ್ತಷ್ಟು ಏರಿಕೆಯಾಗಲಿದೆ. ಹಾಗಾಗಿ, ಮೊಬೈಲ್ ಟೆಸ್ಟಿಂಗ್ ಹಾಗೂ ಮೊಬೈಲ್ ಟ್ರಯಾಜಿನ್ ವ್ಯವಸ್ಥೆ ಬಿಬಿಎಂಪಿಯಲ್ಲಿ ಚಾಲನೆಯಲ್ಲಿದೆ ಎಂದು ಗೌರವ್ ಗುಪ್ತ ತಿಳಿಸಿದರು.

BBMP Commissioner Gaurav Gupta
ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ

By

Published : Jan 20, 2022, 4:48 PM IST

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಸೋಂಕು ಹರಡುವಿಕೆಯನ್ನು ತಡೆಯಲು, ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು ಕೋವಿಡ್ ಪರೀಕ್ಷೆಗೆ ಮೊಬೈಲ್ ಯೂನಿಟ್‌ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗಲಿದೆ. ಹಾಗಾಗಿ, ಮೊಬೈಲ್ ಟೆಸ್ಟಿಂಗ್ ಹಾಗೂ ಮೊಬೈಲ್ ಟ್ರಯಾಜಿನ್ ವ್ಯವಸ್ಥೆ ಬಿಬಿಎಂಪಿಯಲ್ಲಿ ಚಾಲನೆಯಲ್ಲಿ ಇದೆ ಎಂದರು.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ

ಕೋವಿಡ್ ನಿಯಂತ್ರಣಕ್ಕೆ ಹಲವು ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಇದನ್ನು ಚಾಚು ತಪ್ಪದೇ ಪಾಲಿಕೆ ಪಾಲಿಸುತ್ತದೆ. ಇನ್ನೂ ಮಾಸ್ಕ್ ಧರಿಸದವರಿಗೆ ಹಾಕುವ ದಂಡ ಹೆಚ್ಚಿಸುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ. ಆದರೆ ದಂಡ ವಿಧಿಸುವವರ ಸಂಖ್ಯೆ ಹೆಚ್ಚಳ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಗೋಶಾಲೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ..

24 ಗಂಟೆಯೊಳಗೆ ಕೋವಿಡ್ ಪರೀಕ್ಷೆ ವರದಿ ಬರುವ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ, 318 ಟ್ರಯಾಜಿನ್ ತಂಡ ಮಾಡಲಾಗಿದೆ. ಇಲ್ಲಿ 3,000 ಕ್ಕೂ ಹೆಚ್ಚು ಸಿಬ್ಬಂದಿ ಇರುತ್ತಾರೆ. ಹಾಸಿಗೆ ಬೇಡಿಕೆ ಈಗಲೂ ಇದೆ, ಖಾಸಗಿ ಆಸ್ಪತ್ರೆಯಲ್ಲಿ ಸಹ ಹಲವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ABOUT THE AUTHOR

...view details