ಕರ್ನಾಟಕ

karnataka

ETV Bharat / city

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ: ಆರೋಪಿಗಳ ಜಾಮೀನು ಅರ್ಜಿ ವಜಾ - BBMP corporator Rekha kadiresh murder case

ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹತ್ಯೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ ಸೆಷನ್ಸ್ ಕೋರ್ಟ್ ನಿರಾಕರಿಸಿದೆ.

bbmp-corporator-rekha-kadiresh-murder-case-court-dismissed-accused-bail
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ: ಆರೋಪಿಗಳ ಜಾಮೀನು ಅರ್ಜಿ ವಜಾ

By

Published : May 4, 2022, 7:00 AM IST

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಮೂವರು ಆರೋಪಿಗಳಿಗೆ ಜಾಮೀನು ನೀಡಲು ನಗರದ ಸೆಷನ್ಸ್‌ ಕೋರ್ಟ್ ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳಾದ ಸ್ಟೀಫನ್‌, ಪುರುಷೋತ್ತಮ್‌ ಮತ್ತು ಅಜಯ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 71ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶೆ ಎಸ್‌. ಸಂಧ್ಯಾ ವಿಚಾರಣೆ ನಡೆಸಿ, ಮನವಿ ಪರಿಗಣಿಸಲು ನಿರಾಕರಿಸಿದ್ದಾರೆ.

ಮಹಿಳೆಯರ ವಿರುದ್ಧದ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದಲ್ಲಿ ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸಿದಂತಾಗುತ್ತದೆ. ಆರೋಪಿಗಳು 2021ರ ಜುಲೈ 5ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂಬ ಕಾರಣಕ್ಕೆ ಜಾಮೀನು ನೀಡಲಾಗದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಾಸಿಕ್ಯೂಷನ್‌ ವಾದ: ಆರೋಪಿಗಳು ರೇಖಾ ಕದಿರೇಶ್‌ ಅವರನ್ನು ಕೊಲೆ ಮಾಡಲು ಪಿತೂರಿ ನಡೆಸಿದ್ದಾರೆ. ವಿಚಾರಣೆ ಮುಗಿಯುವತನಕ ಅವರ ಮುಗ್ಧತೆ ಸಾಬೀತಾಗುವುದಿಲ್ಲ. ಒಂದು ವೇಳೆ ಜಾಮೀನು ನೀಡಿದರೆ ಪ್ರಾಸಿಕ್ಯೂಷನ್‌ ಸಾಕ್ಷಿಗಳಿಗೆ ಬೆದರಿಕೆ ಒಡ್ಡಬಹುದು ಅಥವಾ ಆರೋಪಿಗಳು ನಾಪತ್ತೆಯಾಗಬಹುದು. ಆದ್ದರಿಂದ, ಜಾಮೀನು ಮಂಜೂರು ಮಾಡಬಾರದು’ ಎಂದು ಪ್ರಾಸಿಕ್ಯೂಷನ್‌ ವಾದಿಸಿತ್ತು.

ಛಲವಾದಿಪಾಳ್ಯ ವಾರ್ಡ್‌ನ ಮಾಜಿ ಸದಸ್ಯೆ ಹಾಗೂ ಕದಿರೇಶ್‌ ಪತ್ನಿ ರೇಖಾ ಅವರನ್ನು 2021ರ ಜೂನ್ 24ರಂದು ಫ್ಲವರ್‌ ಗಾರ್ಡನ್‌ನಲ್ಲಿರುವ ಅವರ ಕಚೇರಿ ಬಳಿ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಕಾಟನ್‌ ಪೇಟೆ ಠಾಣೆ ಪೊಲೀಸರು ಪೀಟರ್, ಸೂರ್ಯ, ಸ್ಟೀಫನ್, ಪುರುಷೋತ್ತಮ್, ಅಜಯ್, ಅರುಣ್ ಕುಮಾರ್, ಮಾಲಾ, ಸೆಲ್ವರಾಜ್ ಎಂಬುವರನ್ನು ಬಂಧಿಸಿದ್ದರು.

ಇದನ್ನೂ ಓದಿ :ಮೈಸೂರು: ಕರ್ತವ್ಯದಲ್ಲಿದ್ದಾಗಲೇ ಎಪಿಎಂಸಿ ಏಜೆಂಟ್‌ ರವಿ ಬರ್ಬರ ಹತ್ಯೆ

ABOUT THE AUTHOR

...view details