ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬೆಂಗಳೂರು ದಕ್ಷಿಣ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತೆ ಸಭೆ ನಡೆಸಿದರು.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೋಣನಕುಂಟೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಪಾದಯಾತ್ರೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪೂರ್ವಸಿದ್ಧತೆ ಸಭೆ ನಡೆಸಿ ಮಾತನಾಡಿದರು. ಈ ವೇಳೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್, ಸ್ಥಳೀಯ ಮುಖಂಡ ಆರ್.ಕೆ. ರಮೇಶ್, ಡಿಸಿಸಿ ಅಧ್ಯಕ್ಷ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.
ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತೆ ಸಭೆ ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್, ಡಿಸಿಸಿ ಅಧ್ಯಕ್ಷ ಕೃಷ್ಣಪ್ಪ, ಮುಖಂಡರಾದ ಆರ್.ಕೆ. ರಮೇಶ್, ಸುಷ್ಮಾ ರಾಜಗೋಪಾಲ್ ರೆಡ್ಡಿ ಮತ್ತಿತರರು ಭಾಗವಹಿಸಿ ಈ ಭಾಗದ ರಾಜಕೀಯ ಪರಿಸ್ಥಿತಿ ಹಾಗೂ ಸಂಘಟನೆಯ ವಿವರ ನೀಡಿದರು.
ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತೆ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಸವನಗುಡಿ ವಿಧಾನಸಭಾ ಕ್ಷೇತ್ರದ ಹನುಮಂತನಗರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ಬಿಬಿಎಂಪಿ ಚುನಾವಣೆ ಪೂರ್ವಸಿದ್ಧತೆ ಸಭೆ ನಡೆಸಿದರು. ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್. ಶಂಕರ್, ಮಾಜಿ ಶಾಸಕ ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಕೆಪಿಸಿಸಿ ವಕ್ತರ ಶಂಕರ್ ಗುಹಾ, ಶ್ರೀನಿವಾಸ್ ಮೂರ್ತಿ, ಜಯಶ್ರೀ ಗೌಡ ಮತ್ತಿತರರು ಉಪಸ್ಥಿತರಿದ್ದರು.
ಬಸವನಗುಡಿ ವಿಧಾನಸಭಾ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ಕಾಂಗ್ರೆಸ್ಗೆ ಅಗತ್ಯ ಇರುವ ಪೋಷಣೆ ಹಾಗೂ ಗೆಲ್ಲುವ ಅವಕಾಶಗಳ ಕುರಿತು ನಾಯಕರು ವಿವರ ನೀಡಿದರು. ಇದರ ಜೊತೆ ಸ್ವಾತಂತ್ರ್ಯೋತ್ಸವ ನಡಿಗೆ ಬಳಿಕ ಬೃಹತ್ ಸಮಾವೇಶ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯಲಿದ್ದು, ಅದರ ಸಿದ್ಧತೆ ಸೇರಿದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಾಲೋಚಿಸಿದರು.
ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತೆ ಸಭೆ ಈ ಸಭೆಯ ಬಳಿಕ ಕೆಪಿಸಿಸಿ ಅಧ್ಯಕ್ಷರು ಪದ್ಮನಾಭನಗರದಲ್ಲಿ ಸಭೆ ನಡೆಸಿದರು. ಮುಂಬರುವ ದಿನಗಳಲ್ಲಿ ನಡೆಯುವ ಬಿಬಿಎಂಪಿ ಚುನಾವಣೆಯಲ್ಲಿ ಗೆಲುವಿಗಾಗಿ ಪಕ್ಷದ ಸಂಘಟನೆ ಹಾಗೂ ಗೆಲುವಿನ ಅವಕಾಶಗಳ ಕುರಿತು ಮುಖಂಡರ ಜೊತೆ ಸಮಾಲೋಚಿಸಿದರು.
ಇದನ್ನೂ ಓದಿ:'ಬಿಬಿಎಂಪಿ ಮೀಸಲಾತಿಯಲ್ಲಿ ಸಾಮಾಜಿಕ ನ್ಯಾಯ ಇಲ್ಲ, ಬಿಜೆಪಿಯ ಮತ್ತೊಂದು ಹೆಸರೇ ಮೋಸ'