ಕರ್ನಾಟಕ

karnataka

ETV Bharat / city

ಮೋದಿ ಭೇಟಿ ವೇಳೆ ಅಭಿವೃದ್ಧಿಪಡಿಸಿದ್ದ ರಸ್ತೆ ಕುಸಿತ: ಮೂವರು ಇಂಜಿನಿಯರ್​ಗೆ ನೋಟಿಸ್ ನೀಡಿದ ಬಿಬಿಎಂಪಿ - ಮೋದಿ ಭೇಟಿ ವೇಳೆ ಅಭಿವೃದ್ಧಿಪಡಿಸಿದ್ದ ರಸ್ತೆ ಕುಸಿತ

ಜೂನ್ 20 ರಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು. ಮೋದಿ ಸಾಗುವ ರಸ್ತೆ ಅಭಿವೃದ್ಧಿಗಾಗಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸುಮಾರು 23 ಕೋಟಿ ರೂ. ವೆಚ್ಚ ಮಾಡಿತ್ತು. ಆದ್ರೆ, ಅಭಿವೃದ್ಧಿಪಡಿಸಿದ್ದ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ಈ ಕುರಿತು ಕಾರಣ ಕೇಳಿ ಮೂವರು ಇಂಜಿನಿಯರ್​ಗಳಿಗೆ ಬಿಬಿಎಂಪಿ ನೋಟಿಸ್ ನೀಡಿದೆ.

ಬಿಬಿಎಂಪಿ
ಬಿಬಿಎಂಪಿ

By

Published : Jun 24, 2022, 12:48 PM IST

Updated : Jun 24, 2022, 3:01 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ರಾಜಧಾನಿ ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಾಗಿದ್ದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದ ಪ್ರಕರಣ ಸಂಬಂಧ ಕಾಮಗಾರಿ ನಿರ್ವಹಿಸಿದ್ದ ಬಿಬಿಎಂಪಿಯ ಮೂವರು ಇಂಜಿನಿಯರ್​ಗಳಿಗೆ ಶೋಕಾಸ್​ ನೋಟಿಸ್​ ನೀಡಿಲಾಗಿದೆ.

ಆರ್​​.ಆರ್​​​.ನಗರ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಎಂ.ಟಿ.ಬಾಲಾಜಿ, ಆರ್​​​.ಆರ್​​​.ನಗರದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​ ಇಂಜಿನಿಯರ್​​ ಹೆಚ್​.ಜೆ.ರವಿ, ಆರ್​​.ಆರ್​​​.ನಗರ ಅಸಿಸ್ಟೆಂಟ್​ ಇಂಜಿನಿಯರ್​​ ಐ.ಕೆ.ವಿಶ್ವಾಸ್​ಗೆ ಪಾಲಿಕೆಯಿಂದ ನೋಟಿಸ್​ ನೀಡಲಾಗಿದೆ.

ಜೂನ್ 20 ರಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು. ಪ್ರಧಾನಿ ಮೋದಿ ಸಾಗುವ ರಸ್ತೆ ಅಭಿವೃದ್ಧಿಗಾಗಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸುಮಾರು 23 ಕೋಟಿ ರೂ. ವೆಚ್ಚ ಮಾಡಿತ್ತು.

ಇಂಜಿನಿಯರ್​ಗೆ ನೋಟಿಸ್ ನೀಡಿದ ಬಿಬಿಎಂಪಿ

ನೋಟಿಸ್​ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕಾಮಗಾರಿಗಳ ಪೈಕಿ ಜ್ಞಾನಭಾರತಿಯ ಡಾ.ಬಿ.ಆರ್. ಅಂಬೇಡ್ಕರ್‌ ಸ್ಕೂಲ್ ಆಫ್‌ ಎಕಾನಮಿಕ್ಸ್‌ (ಬೇಸ್‌) ಕ್ಯಾಂಪಸ್‌ ಬಳಿ 6 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗಿತ್ತು. ಈ ರಸ್ತೆ ಇದೀಗ ಕುಸಿದು ಹೋಗಿದೆ. ಆದ್ದರಿಂದ ರಸ್ತೆ ಕಾಮಗಾರಿ ನಿರ್ವಹಿಸಿದ್ದ ಮೂವರು ಇಂಜಿನಿಯರ್​ಗಳಿಗೆ ಬಿಬಿಎಂಪಿಯ ರೋಡ್​ ಇನ್​ಫ್ರಾಸ್ಟ್ರಕ್ಚರ್​​​​ ಚೀಫ್​​ ಇಂಜಿನಿಯರ್​ ಶೋಕಾಸ್ ನೋಟಿಸ್​ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ನನಗೆ ತಿನ್ನಲು ಬಿಸ್ಕತ್ತು, ಚಾಕೊಲೇಟ್, ನೀರು ಕೊಟ್ಟರು.. ಕಿಡ್ನ್ಯಾಪ್​ ಬಗ್ಗೆ ಮಾಹಿತಿ ಬಿಚ್ಚಿಟ್ಟ ಬಾಲಕ!

Last Updated : Jun 24, 2022, 3:01 PM IST

ABOUT THE AUTHOR

...view details