ಕರ್ನಾಟಕ

karnataka

ETV Bharat / city

ಕಸದ ಲಾರಿಗೆ ಬಾಲಕಿ ಬಲಿ.. ಪಾಲಿಕೆ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕೆ ಗರಂ - BBMP lorry hit the girl, girl died in accident

ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಹೆಚ್ .ಡಿ ಕುಮಾರಸ್ವಾಮಿ ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಪಾಲಿಕೆಯ ನಿರ್ಲಕ್ಷ್ಯವೇ ಬಾಲಕಿಯ ಸಾವಿಗೆ ಕಾರಣ ಎಂದು ಕಿಡಿಕಾರಿದ್ದಾರೆ.

bbmp-lorry-hit-the-girl-girl-died-in-accident
ಕಸದ ಲಾರಿಗೆ ಬಾಲಕಿ ಬಲಿ: ಪಾಲಿಕೆ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ

By

Published : Mar 21, 2022, 9:42 PM IST

ಬೆಂಗಳೂರು: ಹೆಬ್ಬಾಳದ ಬಳಿ ಶಾಲಾ ಬಾಲಕಿಯೊಬ್ಬಳನ್ನು ಬಿಬಿಎಂಪಿ ಕಸದ ಲಾರಿ ಬಲಿ ಪಡೆದ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್​ಡಿಕೆ, ಗಬ್ಬೆದ್ದು ಹೋಗಿರುವ ಪಾಲಿಕೆಯನ್ನು ಮೊದಲು ಸ್ವಚ್ಛ ಮಾಡಬೇಕು ಎಂದು ಹೇಳಿದ್ದಾರೆ. ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಂತಾಗಿದೆ. ಹೆಬ್ಬಾಳದ ಮೇಲ್ಸೇತುವೆ ಬಳಿ ಕಸದ ಲಾರಿಗೆ ನೂರು ವರ್ಷ ಬಾಳಿ ಬದುಕಬೇಕಿದ್ದ ಬಾಲಕಿ ಬಲಿಯಾಗಿದ್ದಾಳೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ ಹೆಬ್ಬಾಳ ಪೊಲೀಸ್ ಠಾಣೆಯ ಮುಂಭಾಗದ ಅಂಡರ್ ಪಾಸ್ ನಲ್ಲಿ ನೀರು ತುಂಬಿತ್ತು. ಹೀಗಾಗಿ ಮಕ್ಕಳು ಅಂಡರ್ ಪಾಸ್ ನಲ್ಲಿ ಹೋಗದೆ ರಸ್ತೆ ಮೂಲಕ ದಾಟುತ್ತಿದ್ದರು. ಆ ಸಂದರ್ಭದಲ್ಲಿ ದುರಂತ ಘಟಿಸಿದೆ ಎಂದು ಹೇಳಿದ್ದಾರೆ. ಹೈಕೋರ್ಟ್ ಈ ಬಗ್ಗೆ ಛೀಮಾರಿ ಹಾಕಿದ್ದರೂ, ಎಂಜಿನಿಯರುಗಳನ್ನು ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ನೀಡಿದ್ದರೂ ಎಮ್ಮೆ ಚರ್ಮದ ಪಾಲಿಕೆ ಪಾಠ ಕಲಿತಂತಿಲ್ಲ. ಬಿಬಿಎಂಪಿ ಆಟಗಳಿಗೆ ಸೀಟಿ ಹೊಡೆಯುತ್ತಾ, ಅಲ್ಲಿನ ಅದಕ್ಷ ಅಧಿಕಾರಿಗಳನ್ನು ಪೊರೆದು ಪೋಷಣೆ ಮಾಡುತ್ತಿರುವ ಸರ್ಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲವಾಗಿದೆ ಎಂದು ಕುಮಾರಸ್ವಾಮಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು ನಗರದ ಗೌರವ, ಪ್ರತಿಷ್ಠೆ ಹಾಳು ಮಾಡುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಅಲ್ಲಿಂದ ಹೊರಹಾಕಿ ಬಿಬಿಎಂಪಿಯನ್ನು ಮೊದಲು ಸ್ವಚ್ಛಗೊಳಿಸಬೇಕಿದೆ. ಅಲ್ಲಿಂದಲೇ ಬೆಂಗಳೂರಿನ ಸ್ವಚ್ಛತೆ ಆರಂಭವಾಗಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಹೆಚ್​ಡಿಕೆ ಚಾಟಿ ಬೀಸಿದ್ದಾರೆ.

ಓದಿ :ಹಿಜಾಬ್ ತೀರ್ಪು ವಿರೋಧಿಸಿ ಪರೀಕ್ಷೆ ಬಹಿಷ್ಕಾರ: ಮರು ಪರೀಕ್ಷೆ ಸಾಧ್ಯವಿಲ್ಲ- ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌

ABOUT THE AUTHOR

...view details