ಕರ್ನಾಟಕ

karnataka

ರೂಪಾಂತರಿ ಕೊರೊನಾ ಭೀತಿ ತಡೆಯಲು ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಸಭೆ

By

Published : Dec 31, 2020, 4:27 AM IST

ರೂಪಾಂತರಿ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಸಭೆ ನಡೆಸಿ, ಕೆಲವೊಂದು ತೀರ್ಮಾನಗಳನ್ನು ತೆಗೆದುಕೊಂಡಿದೆ.

bbmp meeting
ಬಿಬಿಎಂಪಿ ಸಭೆ

ಬೆಂಗಳೂರು:ಈಗಾಗಲೇ ಬ್ರಿಟನ್​ನಿಂದ ನಗರಕ್ಕೆ ಮರಳಿದ ಪ್ರಯಾಣಿಕರಲ್ಲಿ ರೂಪಾಂತರಿ ಕೊರೊನಾ ಕಂಡು ಬಂದಿರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯಲ್ಲಿ ಸಭೆ ನಡೆಸಲಾಯಿತು.

ನಗರದಲ್ಲಿ ರೂಪಾಂತರಗೊಂಡ ಕೊರೊನಾ ಯಾವ ವಲಯಗಳಲ್ಲಿ, ಎಷ್ಟು ಪ್ರಕರಣಗಳು ಕಂಡುಬಂದಿವೆ ಎಂದು ಮಾಹಿತಿ ಪಡೆದ ಆಡಳಿತಾಧಿಕಾರಿಗಳು, ಸರ್ಕಾರದ ಮಾರ್ಗಸೂಚಿಯ ಪ್ರಕಾರ ನಿಯಮಗಳನ್ನು ಪಾಲನೆ ಮಾಡಿ ಸರಿಯಾಗಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಒಟ್ಟು 18 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರಲ್ಲಿ ಮೂವರಲ್ಲಿ ರೂಪಾಂತರಿ ಕೊರೊನಾ ಕಂಡುಬಂದಿದೆ. ಸೋಂಕಿತರಿಗೆ ಸಂಬಂಧಿಸಿದಂತೆ 54 ಪ್ರಾಥಮಿಕ ಸಂಪರ್ಕಿತರು ಹಾಗೂ 92 ದ್ವಿತೀಯ ಸಂಪರ್ಕಿತರು ಪತ್ತೆಯಾಗಿದ್ದಾರೆ.

ಇದನ್ನೂ ಓದಿ:ರೋಗ ನಿರೋಧಕ ಶಕ್ತಿಯಿಂದ ತಪ್ಪಿಸಿಕೊಳ್ಳುವ ರೂಪಾಂತರಿ ಕೊರೊನಾ..!

ಸೋಂಕು ದೃಢಪಟ್ಟವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ/ದ್ವಿತೀಯ ಸಂಪರ್ಕಿತರನ್ನು ಪಾಲಿಕೆ ವತಿಯಿಂದ ಗುರುತಿಸಿರುವ ಹೋಟೆಲ್/ರೆಸಿಡೆನ್ಸಿಗಳಲ್ಲಿ ಕ್ವಾರಂಟೈನ್​​ ಮಾಡಲಾಗಿದೆ.

ಬೊಮ್ಮನಹಳ್ಳಿ ವಲಯದ ಅಪಾರ್ಟ್​​​ಮೆಂಟ್​ನಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದ್ದು, ಅಪಾರ್ಟ್​​ಮೆಂಟ್​​ನಲ್ಲಿಯೇ 33 ಮಂದಿಯನ್ನು ಸಾಂಸ್ಥಿಕ ಕ್ವಾರಂಟೈನ್​ ಮಾಡಲಾಗಿದೆ ಎಂದು ಬಿಬಿಎಂಪಿ ಸಭೆಯಲ್ಲಿ ಮಾಹಿತಿ ನೀಡಲಾಗಿದ್ದು, ಪ್ರಾಥಮಿಕ ಸಂಪರ್ಕಿತರನ್ನು ಆದಷ್ಟು ಬೇಗ ಸಂಪರ್ಕಿಸಿ, ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ.

ABOUT THE AUTHOR

...view details