ಬೆಂಗಳೂರು:ಶಿಕ್ಷಣ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಿಸುವುದಕ್ಕೆ ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿಯ 198 ವಾರ್ಡ್ಗಳಲ್ಲಿ ಶಿಕ್ಷಣ ವಂಚಿತ ಮಕ್ಕಳಿಗೆ ಹೊಸ ಯೋಜನೆ ತರುವುದಕ್ಕೆ ಮುಂದಾಗಿದೆ. ಅಂದುಕೊಂಡಂತೆ ಆದ್ರೆ ಇದೇ ಆಗಸ್ಟ್ 15 ರಿಂದ ಈ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಶಿಕ್ಷಣಕ್ಕೆ ಎಂದು ವರ್ಷಕ್ಕೆ ಕೋಟ್ಟಿಗಟ್ಟಲೆ ಹಣ ಖರ್ಚು ಮಾಡುತ್ತಿದೆ. ಅಂದುಕೊಂಡಷ್ಟು ಮಕ್ಕಳು ಶಾಲೆಗಳಿಗೆ ಬರುತ್ತಿಲ್ಲ. ಕೂಲಿ ಕಾರ್ಮಿಕ ವರ್ಗದ ಮಕ್ಕಳು, ಬಡ ಕುಟುಂಬದ ಮಕ್ಕಳು ಶಾಲೆಗೆ ಬರದೆ ದಿನಗೂಲಿಗೆ ಹೋಗುತ್ತಿರುವುದು ಕಂಡು ಬರುತ್ತಿದೆ. ಇದಕ್ಕೆ ಬ್ರೇಕ್ ಹಾಕಬೇಕು ಎಂದು ಬಿಬಿಎಂಪಿ ನೂತನ ವಿಶೇಷ ಶಿಕ್ಷಣ ಆಯುಕ್ತ ರಾಮಪ್ರಸಾದ್ ಮನೋಹರ್ ಅಂತಹ ಮಕ್ಕಳಿಗಾಗಿ ರಾತ್ರಿ ಶಾಲೆಯನ್ನು ಆರಂಭಿಸಲು ಮುಂದಾಗಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಶಿಕ್ಷಣ ವಂಚಿತ ಮಕ್ಕಳು ಲಕ್ಷಕ್ಕೂ ಅಧಿಕವಾಗಿದ್ದು, ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದಕ್ಕೆ ಪರಿಹಾರವಾಗಿ ಬಿಬಿಎಂಪಿ ವಿಶೇಷ ಆಯುಕ್ತ ರಾಮ್ ಪ್ರಸಾದ್ ಮನೋಹರ್ ಹೊಸ ಶಿಕ್ಷಣ ರಾತ್ರಿ ಶಾಲೆ ಯೋಜನೆ ಜಾರಿಗೆ ತರಲು ಹೊರಟಿದ್ದಾರೆ. ಈ ಹಿಂದೆ ಬಳ್ಳಾರಿ ಡಿಸಿಯಾಗಿ ಕಾರ್ಯನಿರ್ವಹಿಸಿದ ಮನೋಹರ್ ಈ ರೀತಿ ರಾತ್ರಿ ಶಿಕ್ಷಣ ಯೋಜನೆ ಜಾರಿಗೆ ತಂದು ಸಕ್ಸಸ್ ಆಗಿದ್ದರು. ಈಗ ಇದೇ ಯೋಜನೆಯನ್ನು ಬೆಂಗಳೂರಿನಲ್ಲಿ ಜಾರಿಗೆ ತರಲು ಸಜ್ಜಾಗಿದ್ದಾರೆ.