ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಹೆಚ್ಚುತ್ತಲೇ ಇದೆ. ನಗರದಲ್ಲಿ ಅತ್ಯಂತ ವಾಹನ ದಟ್ಟಣೆ ಇರುವ ಪ್ರಮುಖ ರಸ್ತೆಗಳಲ್ಲಿ ಜೆ.ಸಿ ರಸ್ತೆಯೂ ಒಂದು. ಇಲ್ಲಿನ ಟ್ರಾಫಿಕ್ ಸಮಸ್ಯೆ ತಗ್ಗಿಸುವ ನಿಟ್ಟಿನಲ್ಲಿ ಫ್ಲೈ ಓವರ್ ನಿರ್ಮಾಣ ಮಾಡುವ ಯೋಜನೆಯ ಕುರಿತು ಕಳೆದ ಬಾರಿಯಂತೆ ಮತ್ತೊಮ್ಮೆ ವಿಸ್ತೃತ ವರದಿ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಲು ಬಿಬಿಎಂಪಿ ಮುಂದಾಗಿದೆ.
ಬಿಬಿಎಂಪಿ ಕೇಂದ್ರ ಭಾಗದಲ್ಲಿರುವ ಪ್ರಮುಖ ರಸ್ತೆಯಾದ ಜೆ.ಸಿ. ರಸ್ತೆಯಲ್ಲಿ ಪ್ರತಿ ಗಂಟೆಗೆ 1 ಲಕ್ಷಕ್ಕೂ ಅಧಿಕ ವಾಹನಗಳು ಸಂಚರಿಸುತ್ತವೆ. ಬೆಳಗ್ಗೆ ಮತ್ತು ಸಂಜೆ ವಾಹನಗಳ ಪ್ರಮಾಣ ಅಧಿಕವಾಗಿರುತ್ತದೆ. ಕೇವಲ 1.5 ಕಿ.ಮೀ ರಸ್ತೆ ಕ್ರಮಿಸಲು ಕನಿಷ್ಠ 20 ನಿಮಿಷ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಜೆ.ಸಿ.ರಸ್ತೆಯಿಂದ ಕಸ್ತೂರಬಾ ಗಾಂಧಿ ರಸ್ತೆವರೆಗೆ ಒಟ್ಟು 1.7 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಬಿಬಿಎಂಪಿ ಯೋಜನೆ ರೂಪಿಸಿದೆ ಎಂದು ತಿಳಿದು ಬಂದಿದೆ.