ಬೆಂಗಳೂರು:ತಳ ಹಂತದಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಕಾರ್ಯಕರ್ತರೊಂದಿಗೆ ಸೌಜನ್ಯದಿಂದ ವರ್ತಿಸಿ. ಅವರು ನಿಮ್ಮೆಲ್ಲರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ಮರೆಯದಿರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಆರೋಗ್ಯ ಕಾರ್ಯಕರ್ತರೊಂದಿಗೆ ಸೌಜನ್ಯದಿಂದ ವರ್ತಿಸಿ: ಸಿಎಂ ಬಿಎಸ್ವೈ ಮನವಿ - ಬೆಂಗಳೂರು ಸುದ್ದಿ
ತಳ ಹಂತದಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಕಾರ್ಯಕರ್ತರೊಂದಿಗೆ ಸೌಜನ್ಯದಿಂದ ವರ್ತಿಸಿ. ಅವರು ನಿಮ್ಮೆಲ್ಲರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ಮರೆಯದಿರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಆರೋಗ್ಯ ಕಾರ್ಯಕರ್ತರೊಂದಿಗೆ ಸೌಜನ್ಯದಿಂದ ವರ್ತಿಸಿ: ಸಿಎಂ ಬಿಎಸ್ವೈ ಮನವಿ
ಕೊರೊನಾ ವೈರಸ್ ತಡೆಗಟ್ಟಲು ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಜೊತೆಗೆ ಸಮೀಕ್ಷೆ ನಡೆಸುವ ಮಹತ್ವದ ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಜೀವಕ್ಕಿರುವ ಅಪಾಯ ಲೆಕ್ಕಿಸದೇ ಅವರೆಲ್ಲಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸುವುದು ನಾಗರಿಕರ ಕರ್ತವ್ಯ.
ಈ ಸೋಂಕು ತಡೆಗಟ್ಟಲು ಸಮುದಾಯದ ಸಹಕಾರ, ಸಹಭಾಗಿತ್ವ ಅಗತ್ಯ. ಆದ್ದರಿಂದ ಸರ್ಕಾರದ ಸೂಚನೆಗಳನ್ನು ಪಾಲಿಸಿ ಎಂದು ಸಿಎಂ ಮನವಿ ಮಾಡಿದ್ದಾರೆ.