ಬೆಂಗಳೂರು: ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆಗೆ ಹಾಜರಾಗಲು ಶಾಸಕ ರೋಷನ್ ಬೇಗ್ ಸಮಯಾವಕಾಶ ಕೇಳಿದ್ದಾರೆ.
ಹಜ್ ಯಾತ್ರೆ ಹಾಗೂ ಕೆಲ ವೈಯಕ್ತಿಕ ಕಾರಣಗಳಿಂದಾಗಿ ಇಂದು ವಿಚಾರಣೆಗೆ ಹಾಜರಾಗಲು ಆಗಲ್ಲ. ಹೀಗಾಗಿ 15 ದಿನ ಕಾಲಾವಕಾಶ ನೀಡಬೇಕು ಎಂದು ಅಪರಾಧ ವಿಭಾಗದ ಡಿಸಿಪಿ ಗಿರೀಶ್ ಅವರಿಗೆ ಮನವಿ ಮಾಡಿದ್ದಾರೆ.
ಒಂದೆಡೆ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಹೀಗಾಗಿ ಎಸ್ಐಟಿ ವಿಚಾರಣಗೆ ರೋಷನ್ ಬೇಗ್ ಹಾಜರಾಗುತ್ತಾರಾ, ಇಲ್ಲವಾ ಎನ್ನುವ ಪ್ರಶ್ನೆ ಕೂಡ ಎದ್ದಿತ್ತು. ಇದೀಗ ವೈಯಕ್ತಿಕ ಕಾರಣ ಹೇಳಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲವೆಂದು ತಿಳಿಸಿದ್ದಾರೆ.
ಶಿವಾಜಿನಗರ ಕ್ಷೇತ್ರದ ಶಾಸಕನಾಗಿರುವ ರೋಷನ್ ಬೇಗ್ ಐಎಂಎ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆಂದು ಐಎಂಎ ಆರೋಪಿ ಮನ್ಸೂರ್ ಆಡಿಯೋ ಮತ್ತು ವಿಡಿಯೋದಲ್ಲಿ ತಿಳಿಸಿದ್ದರು. ಇದನ್ನಾಧರಿಸಿ ಇಂದು ಬೆಳಗ್ಗೆ 11 ಗಂಟೆಗೆ ಸಿಒಡಿ ಕಚೇರಿಗೆ ರೋಷನ್ ಬೇಗ್ ಬರಬೇಕೆಂದು ಎಸ್ಐಟಿ ಅಧಿಕಾರಿಗಳು ಸೂಚನೆ ನೀಡಿದ್ದರು.