ಬೆಂಗಳೂರು:ಲಾಭದಾಯಕ ಕಂಪನಿಗಳಲ್ಲಿ ಒಂದಾಗಿರುವ ಬಿಇಎಂಎಲ್‌ನ ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿ ನಗರದ ಪುರಭವನದ ಮುಂಭಾಗ ಬಿಇಎಂಎಲ್ ಎಂಪ್ಲಾಯಿಸ್ ಅಸೋಸಿಯೇಷನ್ ಸದಸ್ಯರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಬಿಜೆಪಿ ದೇಶದ ಲಾಭದಾಯಕ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮೊದಲು ಕೇವಲ ಶೇ.26% ಖಾಸಗೀಕರಣ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಆದರೀಗ ಪೂರ್ಣ ಖಾಸಗೀಕರಣ ಮಾಡಲು ಹೊರಟಿದೆ. ಸ್ವಾಯತ್ತ ಸಂಸ್ಥೆಗಳು ದೇಶದ ಆಸ್ತಿ. ಇದನ್ನ ಖಾಸಗೀಕರಣ ಮಾಡಲು ಬಿಡುವುದಿಲ್ಲ ಎಂದು ಜಂಟಿ ಕ್ರಿಯಾ ಸಮಿತಿ ಸಂಚಾಲಕ ದೊಮ್ಮಲೂರು ಶ್ರೀನಿವಾಸ್ ರೆಡ್ಡಿ ಹೇಳಿದರು.
ಬಿಇಎಂಎಲ್ ಎಂಪ್ಲಾಯಿಸ್ ಅಸೋಸಿಯೇಷನಿಂದ ಪ್ರತಿಭಟನೆ.. ಒಂದು ವೇಳೆ ಸ್ವಾಯತ್ತ ಸಂಸ್ಥೆಗಳು ಖಾಸಗೀಕರಣ ಮಾಡಿದರೆ, ವಿಕಲಚೇತನರು, ಹಿಂದುಳಿದ ವರ್ಗದವರಿಗೆ ಇರುವ ಮೀಸಲಾತಿ ತೆಗೆಯುತ್ತಾರೆ. ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಕುತ್ತು ಬರುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಖಾಸಗೀಕರಣ ನಿಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ನವೆಂಬರ್ 15ರಾಜಭವನ ಚಲೋ ಮಾಡುತ್ತೇವೆ. ಖಾಸಗೀಕರಣ ಸಂಬಂಧ ರಾಜ್ಯಪಾಲರಿಗೆ ಪತ್ರ ಸಲ್ಲಿಸುತ್ತೇವೆ. ಕೇಂದ್ರ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೇ ದಿಲ್ಲಿ ಚಲೋ ಮಾಡುತ್ತೇವೆ ಎಂದು ಶ್ರೀನಿವಾಸ್ ಎಚ್ಚರಿಕೆ ನೀಡಿದರು.