ಬೆಂಗಳೂರು :ಆ್ಯಸಿಡ್ ದಾಳಿಗೆ ಒಳಗಾದ ಯುವತಿಗೆ ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಎರಡು ದಿನಗಳ ಹಿಂದೆ ಕೊನೆಯ ಹಂತದ ಸರ್ಜರಿ ಮಾಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಈ ನಡುವೆ ಸಂತ್ರಸ್ತೆಗೆ ಆರೋಪಿ ನಾಗೇಶ್ ಕಾಲಿಗೆ ಗುಂಡು ಹೊಡೆದ ಫೋಟೋ ನೋಡಿ ಖುಷಿಯಾಗಿದ್ದಾಳೆ.
ಕಳೆದ ಏಪ್ರಿಲ್ನಲ್ಲಿ ಆರೋಪಿ ನಾಗೇಶ್ ಪ್ರೀತಿಗೆ ನಿರಾಕರಿಸಿದಕ್ಕೆ ಯುವತಿ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದ. ತಮಿಳುನಾಡಿನ ಆಶ್ರಮವೊಂದರಲ್ಲಿ ಅವಿತುಕೊಂಡಿದ್ದ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದ್ದರು. ಈ ವೇಳೆ ಮೂತ್ರವಿಸರ್ಜನೆ ನೆಪದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಈತನ ಮೇಲೆ ಪೊಲೀಸರು ಗುಂಡು ಹೊಡೆದಿದ್ದರು.