ಕರ್ನಾಟಕ

karnataka

ETV Bharat / city

ಮಚ್ಚು, ಲಾಂಗು ಬೀಸಿ ಎಸ್ಕೇಪ್: ಕೊಲೆ ಕೇಸ್​ ಆರೋಪಿಯ ತಲೆ, ಕುತ್ತಿಗೆಗೆ ಬಿತ್ತು ಏಟು - ಕೊಲೆ ಪ್ರಕರಣದ ಆರೋಪಿ ಮೇಲೆ ದಾಳಿ

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಯ ಮೇಲೆ ಕೊಲೆ ಯತ್ನ ನಡೆದಿದೆ ಎನ್ನಲಾದ ಘಟನೆಯೊಂದು ನಡೆದಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ

attack on murder case accused
ಕೊಲೆ ಕೇಸ್​ ಆರೋಪಿಯ ತಲೆ, ಕುತ್ತಿಗೆಗೆ ಬಿತ್ತು ಏಟು

By

Published : Mar 2, 2020, 2:28 AM IST

ಕೆಆರ್ ಪುರ (ಬೆಂಗಳೂರು): ಲಾಂಗು, ಮಚ್ಚಿನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.

ಮಹದೇವಪುರದಲ್ಲಿ ಲೋಕೇಶ್ ಅಲಿಯಾಸ್ ಲೋಕಿಯ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಗಡ್ಡೆ ಮುರಳಿ ಮತ್ತು ಆತನ ಕಡೆಯವರು ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಬೈಕಿನಲ್ಲಿ ಬಂದು ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ. ಹಲ್ಲೆಗೆ ಹಳೆಯ ದ್ವೇಷವೇ ಕಾರಣ ಎನ್ನಲಾಗುತ್ತಿದೆ.

ಗಾಯಾಳು ಲೋಕೇಶ್ ನನ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಪಿಸಿ 307 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಮಹದೇವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 2018ರಲ್ಲಿ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಜಯ್ ಕೊಲೆ ಪ್ರಕರಣ ಆರೋಪಿಯಾಗಿದ್ದ ಗಾಯಾಳು ಲೋಕೇಶ್ A2 ಆರೋಪಿಯಾಗಿ ಜೈಲಿಗೆ ಹೋಗಿ ಬಂದಿದ್ದಾನೆ. ಅಜಯ್ ಕೊಲೆ ಮಾಡಿದ ದ್ವೇಷಕ್ಕೆ ಲೋಕೇಶ್ ಹತ್ಯೆ ಮಾಡಲು ಯತ್ನಿಸಲಾಗಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಸದ್ಯ ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ABOUT THE AUTHOR

...view details