ಬೆಂಗಳೂರು:ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ತಮ್ಮ ಚೊಚ್ಚಲ ಬಜೆಟ್ನಲ್ಲಿ ಬೆಂಗಳೂರು ನಗರಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ. 6000 ಕೋಟಿ ರೂ ವೆಚ್ಚದಲ್ಲಿ ಅಮೃತ ಯೋಜನೆ ಮೂಲಕ ಮೂಲಭೂತ ಸೌಕರ್ಯ ಒದಗಿಸಲು ಸಿಎಂ ಬಜೆಟ್ನಲ್ಲಿ ತಿಳಿಸಿದ್ದಾರೆ.
ಇದಲ್ಲದೇ, ಹೆಬ್ಬಾಳದಿಂದ ಜೆಪಿ ನಗರದವರೆಗೆ 32 ಕಿ ಮೀ ಹೊರ ವರ್ತುಲ ರಸ್ತೆ ನಿರ್ಮಾಣ, ಸರ್ಜಾಪುರದಿಂದ ಹೆಬ್ಬಾಳದವರೆಗೆ 15,000 ಕೋಟಿ ರೂ. ವೆಚ್ಚದಲ್ಲಿ 37 ಕಿಮೀ ಉದ್ದದ ರಸ್ತೆ, ತುಮಕೂರು ರಸ್ತೆಯಿಂದ ಹಳೆ ಮದ್ರಾಸ್ ರಸ್ತೆಯವರೆಗೆ 73 ಕಿಮೀ ಮತ್ತು 100 ಮೀ ಅಗಲದ ಫೆರಿಫೆರಲ್ ರಿಂಗ್ ರಸ್ತೆಯನ್ನು 21,091 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಬಜೆಟ್ನಲ್ಲಿ ಘೋಷಿಸಲಾಗಿದೆ.
ಗೊರಗುಂಟೆಪಾಳ್ಯದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಗ್ರೇಡ್ ಸೆಪರೇಟರ್ ನಿರ್ಮಾಣ, ಕೇಂಪೆಗೌಡ ಬಡಾವಣೆಯಲ್ಲಿ 1297 ಎಕರೆ ಜಮೀನು ಸ್ವಾಧೀನಪಡಿಸಿಕೊಂಡು ಆಧುನಿಕ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿ, NGEF ನ 105 ಎಕರೆ ಪ್ರದೇಶದಲ್ಲಿ ಸಿಂಗಾಪುರ ಮಾದರಿಯಲ್ಲಿ ಗ್ರೀನ್ ಎಕ್ಸ್ ಪೋ ನಿರ್ಮಾಣ ಮಾಡಲು ಸರ್ಕಾರ ಘೋಷಿಸಿದೆ.
ಮೆಗಾ ಜ್ಯುವೆಲ್ಲರಿ ಪಾರ್ಕ್:ಇನ್ನು ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಮಾಡಲು ಸರ್ಕಾರ ಉದ್ದೇಶಿಸಿದ್ದು, ಇದರಿಂದ 10 ಸಾವಿರ ಜನರಿಗೆ ಉದ್ಯೋಗಾವಕಾಶ ಸಿಗುವ ನಿರೀಕ್ಷೆ ಇದೆ. ಒಟ್ಟಾರೆ ಬೆಂಗಳೂರು ನಗರ ಅಭಿವೃದ್ಧಿಗೆ 8,409 ಕೋಟಿ ರೂಪಾಯಿ ಅನುದಾನವನ್ನು ಬಜೆಟ್ನಲ್ಲಿ ಮೀಸಲಿಡಲಾಗಿದೆ.
ರಾಜಧಾನಿ ಬೆಂಗಳೂರಿಗೆ ಏನೆಲ್ಲ ಸಿಕ್ತು
- ಬಿಬಿಎಂಪಿ ಚುನಾವಣಾ ದೃಷ್ಟಿಯಿಂದ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಬೊಮ್ಮಾಯಿ
- ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಬರೋಬ್ಬರಿ 8,409 ಕೋಟಿ ಬಿಡುಗಡೆ
- ಬೆಂಗಳೂರು ಯಲಹಂಕದಲ್ಲಿ 350 ಎಕರೆ ವಿಸ್ತೀರ್ಣದಲ್ಲಿ ಅಟಲ್ ಬಿಹಾರಿ ವಾಜಪೇಯಿ ಉದ್ಯಾನ ವನ(ಲಾಲ್ ಬಾಗ್, ಕಬ್ಬನ್ ಪಾರ್ಕ್ ಮಾದರಿ)
- ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ, 10 ಸಾವಿರ ಜನರಿಗೆ ಉದ್ಯೋಗಾವಕಾಶ
- ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 498 "ನಮ್ಮ ಕ್ಲಿನಿಕ್ಗಳ ಸ್ಥಾಪನೆ
- ಚೆನ್ನೈ- ಬೆಂಗಳೂರು- ಮೈಸೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ಅನುಷ್ಠಾನಕ್ಕೆ, ಕೇಂದ್ರದೊಂದಿಗೆ ಸಹಯೋಗ
- ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಸಿಗ್ನಲ್ ಮುಕ್ತ ವಾಹನ ಸಂಚಾರಕ್ಕೆ ಬಿಬಿಎಂಪಿ, ಬಿಡಿಎ, ಮತ್ತು ಎನ್ ಹೆಚ್ಎಐ ವತಿಯಿಂದ ಗ್ರೇಡ್ ಸೆಪರೇಟರ್ ಮತ್ತು ಮೇಲುಸೇತುವೆ ಕಾಮಗಾರಿ ಅನುಷ್ಠಾನ
- 15,267 ಕೋಟಿ ರೂ. ವೆಚ್ಚದ ಬೆಂಗಳೂರು ಉಪನಗರ ರೈಲ್ವೇ ಯೋಜನೆ ಜಾರಿಗೆ ಕ್ರಮ
- ಚಿಕ್ಕಬಾಣಾವರ- ಬೈಯಪ್ಪನಹಳ್ಳಿ ಕಾರಿಡಾರ್ ಕಾಮಗಾರಿ ಶೀಘ್ರ ಆರಂಭ
ಹಸಿರು ಬೆಂಗಳೂರು
- NGEF ನ 105 ಎಕರೆ ಜಾಗದಲ್ಲಿ ಸಿಂಗಾಪುರ್ ಮಾದರಿಯಲ್ಲಿ ಗ್ರೀನ್ ಎಕ್ಸಪೋ ನಿರ್ಮಾಣ
- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿ ವಹಿಯಲ್ಲಿರುವ ದಾಖಲಿಸಿರುವ 6 ಲಕ್ಷಕ್ಕೂ ಹೆಚ್ಚು ಸ್ವತ್ತುಗಳನ್ನು ಎ ವಹಿಗೆ ದಾಖಲಿಸಲು, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಕರ್ನಾಟಕ ಅಧಿನಿಯಮಗಳಡಿ ಸೂಕ್ತ ಕಾನೂನು ಕ್ರಮ
- ಬೆಂಗಳೂರಿನ ನಾಲ್ಕು ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
- ಬೆಂಗಳೂರಿನ ಆಯ್ದ 20 ಶಾಲೆಗಳನ್ನು 89 ಕೋಟಿ ರೂ.ಗಳಲ್ಲಿ ಉನ್ನತೀಕರಿಸಿ, ಬೆಂಗಳೂರು ಪಬ್ಲಿಕ್ ಶಾಲೆಗಳ ಅಭಿವೃದ್ಧಿ
- ಬೆಂಗಳೂರು ಸಮಗ್ರ ಅಭಿವೃದ್ಧಿ ಮೂಲಸೌಕರ್ಯ ಅಭಿವೃದ್ಧಿ
ನಾಗರಿಕ ಸೌಲಭ್ಯಗಳು
- ಬೆಂಗಳೂರು ನಗರದ ಮೂಲಭೂತ ಸೌಕರ್ಯಕ್ಕಾಗಿ ಮೂರು ವರ್ಷದಲ್ಲಿ 6,000 ಕೋಟಿ ರೂ. ವೆಚ್ಚದ 'ಅಮೃತ್ ನಗರೋತ್ಥಾನ' ಯೋಜನೆ ಅನುಷ್ಠಾನ
- ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆ ಬಾಕಿ ಇರುವ 1.297 ಎಕರೆ ಭೂಸ್ವಾಧೀನ ಪೂರ್ಣಗೊಳಿಸಿ, ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಕ್ರಮ
- 1,500 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿರುವ ಹಳೆಯ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಪುನರುಜ್ಜೀವನ ಮತ್ತು ಉನ್ನತೀಕರಣ
- ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಆಯೋಜನೆ
- 11,250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ನಮ್ಮ ಮೆಟ್ರೋ ಹಂತ-3 ಯೋಜನೆ ಜಾರಿಗೆ ಕೇಂದ್ರ ಡಿ ಪಿ ಆರ್ ಸಲ್ಲಿಕೆ
- 2022-23ನೇ ಸಾಲಿನಲ್ಲಿ 15,000 ಕೋಟಿ ರೂ. ವೆಚ್ಚದಲ್ಲಿ 37 ಕಿ.ಮೀ. ಉದ್ದದ ಹೊಸ ಮೆಟ್ರೋ ಮಾರ್ಗಕ್ಕೆ ಡಿಪಿಆರ್ ತಯಾರಿಸಲು ಕ್ರಮ
- ವೈಟ್‌ಫೀಲ್ಡ್, ಕೆ.ಆರ್. ಪುರಂ, ಬೈಯ್ಯಪ್ಪನಹಳ್ಳಿ, ಯಶವಂತಪುರ, ಜ್ಞಾನಭಾರತಿ ಮತ್ತು ಯಲಹಂಕ ರೈಲ್ವೆ ನಿಲ್ದಾಣಗಳಲ್ಲಿ 55 ಕೋಟಿ ರೂ. ವೆಚ್ಚದಲ್ಲಿ ಮೆಟ್ರೋ ನಿಲ್ದಾಣದ ಸಂಪರ್ಕ ಕಾಮಗಾರಿ ಅನುಷ್ಠಾನ
- ಬನಶಂಕರಿ ಜಂಕ್ಷನ್‌ನಲ್ಲಿ ರೂ. 45 ಕೋಟಿ ವೆಚ್ಚದಲ್ಲಿ ಸ್ಕೈವಾಕ್
- ನನೆಗುದಿಗೆ ಬಿದ್ದಿರುವ 73 ಕಿ.ಮೀ ಉದ್ದ ಫೆರಿಫರಲ್ ರಸ್ತೆ ನಿರ್ಮಾಣ 21.091 ಕೋಟಿ ವೆಚ್ಚದಲ್ಲಿ ಕಾಮಗಾರಿ ಪಾರಂಭ
ಓದಿ:ವಿಧಾನಸೌಧದ ಮೇಲೆ ಹಾರಿದ ಜೆಟ್: ಆಗಸದಲ್ಲಿ ಮೊದಲ ಬಾರಿಗೆ ಬಜೆಟ್ ಪ್ರಚಾರ!