ಬೆಂಗಳೂರು:ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಅಳವಡಿಸಿರುವ ಎಸಿಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಇದರಿಂದ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಅಗ್ನಿ ಅವಘಡ - ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಗ್ನಿ ಅವಘಡ
ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಂಭಾಗಣದಲ್ಲಿ ಬೆಂಕಿ ಹೊತ್ತಿಕೊಂಡು, ಕೆಲ ಕಾಲತ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
Fire Mishap in Vidhana soudha
ಇಂದು ಸಂಜೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು, ದಿಢೀರ್ ಸ್ಫೋಟಗೊಂಡಿದೆ. ಶಬ್ದ ಕೇಳಿ ಅಲ್ಲಿಗೆ ಬಂದ ವಿಧಾನಸೌಧದ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ. ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಠಡಿ ಸಂಖ್ಯೆ 334ರಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕೀಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.