ಕರ್ನಾಟಕ

karnataka

ETV Bharat / city

ವರ್ತೂರು ಪ್ರಕಾಶ್ ಅಪಹರಣ ಪ್ರಕರಣ: ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಿದ್ದು, ರೌಡಿಶೀಟರ್​ ಮಾಜಿ ಸಚಿವರಾದ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.

Bengaluru police firing on rowdy sheeter
ವರ್ತೂರು ಪ್ರಕಾಶ್ ಅಪಹರಣ ಪ್ರಕರಣ: ರೌಡಿಶೀಟರ್ ಮೇಲೆ ಇಂದಿರಾನಗರ ಪೊಲೀಸರಿಂದ ಫೈರಿಂಗ್

By

Published : Dec 11, 2021, 8:47 AM IST

Updated : Dec 11, 2021, 12:28 PM IST

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ಪ್ರಮುಖ ಆರೋಪಿಯಾದ ರೌಡಿಶೀಟರ್​ ಚಲ್ಲಘಟ್ಟ ಲೋಹಿತ್​ ಅಲಿಯಾಸ್ ರೋಹಿತ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಇಂದಿರಾನಗರ ಠಾಣಾ ವ್ಯಾಪ್ತಿಯ ಕೊಲೆ, ಅಪಹರಣ ಪ್ರಕರಣದಲ್ಲಿ ಹಾಗೂ‌ ಇತರ 17 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಲೋಹಿತ್​ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಮನವಿ ಮಾಡಲಾಗಿದ್ದು, ಆದರೂ ಶರಣಾಗದ ಲೋಹಿತ್ ಪೊಲೀಸ್ ಹೆಡ್​ಕಾನ್ಸ್​ಟೇಬಲ್ ಸೈಯದ್ ಮೊಯೀನುಲ್ಲಾಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ರೌಡಿಶೀಟರ್​ ಚಲ್ಲಘಟ್ಟ ಲೋಹಿತ್​ ಅಲಿಯಾಸ್ ರೋಹಿತ್

ಲೋಹಿತ್​ನ ಬಲಗಾಲಿಗೆ ಗುಂಡೇಟು ಬಿದ್ದಿದ್ದು, ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಷ್ಟೇ ಅಲ್ಲದೇ ಲೋಹಿತ್ ವಿರುದ್ಧ ಹೆಚ್ಎಸ್ಆರ್ ಲೇಔಟ್ ಮತ್ತು ಬನ್ನೇರುಘಟ್ಟ ಠಾಣೆಯಲ್ಲಿ ರೌಡಿಶೀಟರ್ ತೆರೆಯಲಾಗಿದೆ.

ಎಸ್ಐ ಅಮರೇಶ್ ಜೇಗರಕಲ್
ಗಾಯಗೊಂಡಿರುವ ರೌಡಿಶೀಟರ್​

ಈ ಹಿಂದೆ ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಕವಿರಾಜ್​​ ಎಂಬಾತನನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದರು. ಜೆ ಬಿ ನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಚಲ್ಲಘಟ್ಟ ಬಳಿ ಇಂದು ಫೈರಿಂಗ್​ ನಡೆದಿದ್ದು, ಸ್ಥಳಕ್ಕೆ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಭೇಟಿ ನೀಡಿ, ಪರಿಶೀಲಿಸಿದರು.

ಇದನ್ನೂ ಓದಿ:ಮಂಗಳೂರು: ಕಾರಿನಲ್ಲಿದ್ದ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

Last Updated : Dec 11, 2021, 12:28 PM IST

ABOUT THE AUTHOR

...view details