ಬೆಂಗಳೂರು:ಗಣೇಶೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸರು ಅಲರ್ಟ್ ಆಗಿದ್ದಾರೆ. ವಿಶೇಷ ಕಾರ್ಯಾಚರಣೆ ಆರಂಭಿಸಿ ನಗರದ ಯಾವ್ಯಾವ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂಬ ಮಾಹಿತಿ ಕಲೆಹಾಕುತ್ತಿದ್ದಾರೆ.
ಗಣೇಶೋತ್ಸವ ಸಮೀಪಿಸುತ್ತಿದ್ದಂತೆ ಬೆಂಗಳೂರು ಪೊಲೀಸರಿಂದ ಕಟ್ಟೆಚ್ಚರ - ಗಣೇಶೋತ್ಸವ
ಗಣೇಶೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
ತಮ್ಮ ತಮ್ಮ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಗಣೇಶೋತ್ಸವ ಆಚರಿಸಲಾಗುತ್ತದೆ?, ಗಣೇಶೋತ್ಸವ ಆಚರಣೆ ಮಾಡುತ್ತಿರುವವರು ಯಾರು?, ಬಿಬಿಎಂಪಿ ಅನುಮತಿ ಪಡೆದಿದ್ದಾರಾ?, ಸ್ಥಳ ಖಾಸಗಿಯವರಿಗೆ ಸೇರಿದ್ದಾ, ಅಥವಾ ಬಿಬಿಎಂಪಿಯದ್ದಾ? ಏನೆಲ್ಲಾ ವ್ಯವಸ್ಥೆ ಮಾಡಿದ್ದಾರೆ?, ಮೆರವಣಿಗೆ ಪ್ಲಾನ್ ಹೇಗಿದೆ?, ವಿವಾದಾತ್ಮಕ ಸ್ಥಳದಲ್ಲಿ ಉತ್ಸವ ನಡೆಸಲಾಗುತ್ತಿದೆಯಾ? ಎಂಬ ವಿಚಾರಗಳನ್ನು ಮುಂಚಿತವಾಗಿಯೇ ಸಂಗ್ರಹಿಸುತ್ತಿದ್ದಾರೆ. ಅಲ್ಲದೇ ಸ್ಥಳಾವಕಾಶ ಹೇಗಿದೆ?, ಮೈಕ್ ಸೆಟ್, ಆರ್ಕೆಸ್ಟ್ರಾ ಬಳಕೆಯ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದು ಗಣೇಶ ಹಬ್ಬ ಆಯೋಜನೆ ಮಾಡುವವರ ಜೊತೆ ಚರ್ಚೆ ನಡೆಸಲು ಮುಂದಾಗಿದ್ದಾರೆ.
ಇದನ್ನೂ ಓದಿ:ಬೆಂಗಳೂರಲ್ಲಿ ಗಣೇಶೋತ್ಸವದ ಅನುಮತಿಗೆ 63 ಏಕಗವಾಕ್ಷಿ ಕೇಂದ್ರ.. ಪಿಒಪಿ ಗಣೇಶ ಮೂರ್ತಿ ತಯಾರಿಕೆ ನಿಷೇಧ