ಬೆಂಗಳೂರು:ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ಸ್ಥಳ ಮಹಜರಿಗೆ ಪೊಲೀಸರು ಕರೆತಂದಿದ್ದಾರೆ.
ಕಾವಲ್ ಬೈರಸಂದ್ರ ಬಳಿ ಇರುವ ಅಖಂಡ ಶ್ರಿನಿವಾಸ್ ಹಾಗು ಸಹೋದರಿ ಮಗ ನವೀನ್ ಮನೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಬೆಂಕಿ ಹಚ್ವಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನ ಆರೋಪಿಗಳನ್ನು ವಿಶೇಷ ಪೊಲೀಸ್ ತಂಡ ಬಂಧಿಸಿತ್ತು. ಬಂಧನದ ಬಳಿಕ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಕಾರಣ ಘಟನಾ ಸ್ಥಳಕ್ಕೆ ಬಿಎಂಟಿಸಿ ಬಸ್‌ನಲ್ಲಿ ಘಟನಾ ಸ್ಥಳಕ್ಕೆ ಪೊಲೀಸರು ಕರೆತಂದಿದ್ದಾರೆ.